ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಸ್‌ಯುಐ ಸಂಘಟನೆ ನಿಷೇಧಕ್ಕೆ ಆಗ್ರಹ

ವಿದ್ಯಾರ್ಥಿ ಅಭಿಷೇಕ್‌ ಸಾವು ಪ್ರಕರಣ: ಬಿಜೆಪಿ ಪ್ರತಿಭಟನೆ
Last Updated 18 ಜನವರಿ 2017, 6:01 IST
ಅಕ್ಷರ ಗಾತ್ರ

ಉಡುಪಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯ ವಿದ್ಯಾರ್ಥಿ ಅಭಿಷೇಕ್ ಸಾವಿಗೆ ಕಾರಣರಾದವರನ್ನು ಈ ಕೂಡಲೇ ಬಂಧಿಸಬೇಕು ಎಂದು ಆಗ್ರ ಹಿಸಿ ಬಿಜೆಪಿ ನಗರ ಯುವ ಮೋರ್ಚಾದ ಸದಸ್ಯರು ನಗರದ ಸರ್ವೀಸ್‌ ಬಸ್‌ ನಿಲ್ದಾಣದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಅಭಿಷೇಕ್ ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ ಪರಿಣಾಮ ಮನನೊಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್‌ಎಸ್‌ಯುಐ ಸಂಘಟನೆ ಈ ಘಟನೆಗೆ ಕಾರಣವಾಗಿದೆ.

ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪೆಸಗಿದವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪೊಲೀಸ್‌ ಇಲಾಖೆ ಸಂಪೂರ್ಣ ವಿಫಲವಾಗಿದೆ. ಎನ್‌ಎಸ್‌ ಯುಐ ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟ ನೆಯಾಗಿದೆ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿರುವುದರಿಂದ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ.

ಅಭಿಷೇಕ್‌ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಎನ್‌ಎಸ್‌ಯುಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ಪ್ರತಿಭಟನಾಕಾ ರರು ಆಗ್ರಹಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ. ಉದಯ ಕುಮಾರ್ ಶೆಟ್ಟಿ ಮಾತ ನಾಡಿ, ಅಮಾಯಕ ವಿದ್ಯಾರ್ಥಿಯೊಬ್ಬ ವಿನಾಕಾರಣ ಮೃತಪಟ್ಟ ಈ ಘಟನೆಯ ಬಗ್ಗೆ ವಿಸ್ತ್ರತ ತನಿಖೆಯಾಗಬೇಕು. ಇದರಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷ ಪಾತ್ರ ಇರುವವರ ವಿರುದ್ಧ ಕ್ರಮ ಕೈಗೊಳ್ಳ ಬೇಕು. ಎನ್‌ಎಸ್‌ಯುಐ ಸಂಘಟನೆಯ ಚಟುವಟಿಕೆಯ ಮೇಲೆ ನಿಗಾ ಇಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಮಾಜಿ ಶಾಸಕ ಕೆ. ರಘುಪತಿ ಭಟ್‌, ನಗರ ಯುವ ಮೋರ್ಚಾ ಅಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಪ್ರಧಾನ ಕಾರ್ಯದರ್ಶಿ ದೀಪಕ್ ಶೇಟ್, ಮುಖಂಡರಾದ ಯಶ್‌ಪಾಲ್ ಸುವರ್ಣ, ಪ್ರಭಾಕರ ಪೂಜಾರಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT