ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲಮಿತಿಯಲ್ಲಿ ಜನರ ಕೆಲಸ ಮಾಡಿಕೊಡಿ

ಅಧಿಕಾರಿಗಳಿಗೆ ಸಚಿವ ಪ್ರಮೋದ್ ಮಧ್ವರಾಜ್‌ ಸೂಚನೆ
Last Updated 19 ಜನವರಿ 2017, 5:37 IST
ಅಕ್ಷರ ಗಾತ್ರ

ಉಡುಪಿ: ಜನರ ಬಹುತೇಕ ಸಮಸ್ಯೆಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿ ರುತ್ತದೆ. ಆದ್ದರಿಂದ ಕಂದಾಯ ಇಲಾಖೆ ಚೆನ್ನಾಗಿ ಕೆಲಸ ಮಾಡಿದರೆ ಜನರ ಶೇ70ರಷ್ಟು ಸಮಸ್ಯೆಗಳು ಬಗೆಹರಿಯು ತ್ತವೆ ಎಂದು ಮೀನುಗಾರಿಕೆ, ಕ್ರೀಡಾ ಹಾಗೂ ಯುವ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್‌ ಹೇಳಿದರು.

ನಗರದ ಬನ್ನಂಜೆಯ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿ ₹7.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಮಿನಿ ವಿಧಾನಸೌಧಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಈಗಿರುವ ಕಟ್ಟಡ ಅನನುಕೂಲಕರ ವಾಗಿದೆ ಎಂಬ ಕಾರಣಕ್ಕೆ ನೂತನ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಅಧಿಕಾರಿಗಳು ಭ್ರಷ್ಟಾ ಚಾರ ರಹಿತವಾಗಿ ಜನರ ಕೆಲಸ ಮಾಡಿ ಕೊಡಲು ಶ್ರಮಿಸಬೇಕು. ನಗರಸಭೆ ಹಾಗೂ ತಾಲ್ಲೂಕು ಕಚೇರಿಗೆ ಹೆಚ್ಚಿನ ಜನರು ಬರುತ್ತಾರೆ. ಕಾಲಮಿತಿಯಲ್ಲಿ ಅವರ ಕೆಲಸ ಮಾಡಿಕೊಡಿ. ಹೊಸ ಕಟ್ಟಡಕ್ಕೆ ಇನ್ನೂ ₹2.50 ಕೋಟಿ ಅನುದಾನ ತರಲು ಪ್ರಯತ್ನಿಸಲಾಗುತ್ತದೆ ಎಂದು  ಹೇಳಿದರು.

ಶಾಸಕನಾಗಿ ಆಯ್ಕೆಯಾದ ನಂತರ ಮೂರು ವರ್ಷಗಳಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಸರ್ಕಾರದ ವಿವಿಧ ಯೋಜನೆಗಳಿಂದ ಫಲಾನುಭವಿಗಳಿಗೆ ಬಂದಿರುವ ಮೊತ್ತ, ಅಭಿವೃದ್ಧಿ ಕಾಮಗಾರಿ ಮೊತ್ತ ಸೇರಿ ಒಟ್ಟು ₹1,600 ಕೋಟಿ ಅನುದಾನ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಬಂದಿದೆ. ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ, ಕೆಲವು ಮುಗಿದಿವೆ ಹಾಗೂ ಇನ್ನೂ ಕೆಲವು ಕಾಮಗಾರಿಗಳಿಗೆ ಈಗಾಗಲೇ ಶಿಲಾನ್ಯಾಸ ಮಾಡಲಾಗಿದೆ ಎಂದು  ಹೇಳಿದರು.

ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಪೌರಾಯುಕ್ತ ಡಿ. ಮಂಜುನಾಥಯ್ಯ, ಉಡುಪಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ, ಹೆಚ್ಚುವರಿ ಜಿಲ್ಲಾಧಿ ಕಾರಿ ಜಿ. ಅನುರಾಧ, ತಹಶೀಲ್ದಾರ್ ಮಹೇಶ್‌ಚಂದ್ರ, ಜಿಲ್ಲಾ ಪಂಚಾಯಿತಿ ಸದಸ್ಯ ಜನಾರ್ದನ ತೋನ್ಸೆ ಇದ್ದರು. ಸುಮಾ ಕಾರ್ಯಕ್ರಮ ನಿರೂಪಿಸಿದರು.

ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡಿ
ಹಣ ನೀಡಿ ವರ್ಗಾವಣೆ ಮಾಡಿಸಿಕೊಳ್ಳುವ ಹಾಗೂ ಬೇಕಾದ ಹುದ್ದೆ ಪಡೆಯುವ ಪರಿಸ್ಥಿತಿ ಬೇರೆ ಕಡೆ ಇದೆ. ಆದರೆ, ನನ್ನ ಕ್ಷೇತ್ರದಲ್ಲಿ ಅಂತಹ ಸ್ಥಿತಿ ಇಲ್ಲ, ಅಧಿಕಾರಿಗಳಿಗೆ ಒಂದೇ ಒಂದು ರೂಪಾಯಿಯನ್ನು ನೀಡಬೇಕಿಲ್ಲ. ಆದ್ದರಿಂದ ಭ್ರಷ್ಟಾಚಾರ ರಹಿತವಾಗಿ ಕಾಲಮಿತಿ ಯಲ್ಲಿ ಜನರ ಕೆಲಸ ಮಾಡಿಕೊಡಿ ಎಂದು ಸಚಿವ ಪ್ರಮೋದ್ ಮಧ್ವರಾಜ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT