ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವನಬಾಗೇವಾಡಿ ಬಂದ್‌ ಇಂದು

ನಿಡೋಣಿಯಲ್ಲಿ ಬಸವೇಶ್ವರ ಪ್ರತಿಮೆಗೆ ಅವಮಾನ ಕೃತ್ಯಕ್ಕೆ ಖಂಡನೆ; ಸಂಘಟನೆಗಳಿಂದ ಪ್ರತಿಭಟನೆ
Last Updated 19 ಜನವರಿ 2017, 5:55 IST
ಅಕ್ಷರ ಗಾತ್ರ

ಬಸವನಬಾಗೇವಾಡಿ:  ವಿಜಯಪುರ ತಾಲ್ಲೂಕಿನ ನಿಡೋಣಿಯಲ್ಲಿ ಬಸವಣ್ಣನವರ ಪುತ್ಥಳಿಗೆ ಅಪಮಾನ ಮಾಡಿರುವ ಘಟನೆಯನ್ನು ಖಂಡಿಸಿ ರಾಷ್ಟ್ರೀಯ ಬಸವಸೈನ್ಯ, ಡಿಎಸ್‌ಎಸ್‌, ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಇದೇ 19 ರಂದು ಬಸವನಬಾಗೇವಾಡಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ಕಾಂಗ್ರೆಸ್‌ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ರುಕ್ಮಿಣಿ ರಾಠೋಡ, ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.

ಪಟ್ಟಣದಲ್ಲಿ ಬುಧವಾರ ವಿವಿಧ ಸಂಘಟನೆಗಳ ಪದಾಧಿಕಾರಿಗಳ ಸಭೆ ಯಲ್ಲಿ ಮಾತನಾಡಿದ ಅವರು, ವಿಶ್ವಕ್ಕೆ  ಸಮಾನತೆ ಸಂದೇಶ ಸಾರಿದ ಬಸವಣ್ಣ ನವರ ಪುತ್ಥಳಿಗೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುವುದು ಬಸವ ಭಕ್ತರಿಗೆ ನೋವು ತರಿಸಿದೆ. ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಬಸವರಾಜ ತುಂಬಗಿ, ಉಪಾಧ್ಯಕ್ಷ ಸಂಜೀವ ಕಲ್ಯಾಣಿ, ಮುಖಂಡ ಸಂಗಮೇಶ ಓಲೇಕಾರ ಮಾತನಾಡಿ, ಬಸವಣ್ಣನವರು ಯಾವುದೇ ಒಂದು ವರ್ಗಕ್ಕೆ ಸೀಮಿತ ವಾಗಿಲ್ಲ. ಅವರು ಎಲ್ಲ ವರ್ಗದವರ ಏಳಿಗೆಗಾಗಿ ಶ್ರಮಿಸಿದ ಮಹಾಪುರುಷ. ಅವರು ಜನಿಸಿದ ಜಿಲ್ಲೆಯಲ್ಲಿಯೇ ಬಸವಣ್ಣನ ಪುತ್ಥಳಿಗೆ ಅಪಮಾನ ಮಾಡಿರುವುದು ಖಂಡನೀಯ. ಘಟನೆಗೆ ಕಾರಣರಾದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.

ಡಿಎಸ್‌ಎಸ್‌ ಮುಖಂಡ ಸುರೇಶ ಮಣ್ಣೂರ, ರೈತ ಸಂಘದ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿ ಬಸವಣ್ಣನವರ ಪುತ್ಥಳಿಗೆ ಅಪಮಾನ  ಸಹಿಸುವುದಿಲ್ಲ ಎಂದು ಹೇಳಿದರು.

ಬಂದ್‌ ಕರೆ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಹಾಗೂ ಶಾಲಾ, ಕಾಲೇಜುಗಳನ್ನು ಬಂದ್ ಮಾಡುವಂತೆ ವಿವಿಧ ಸಂಘಟನೆಯ ಕಾರ್ಯಕರ್ತರು ಮನವಿ ಮಾಡಿಕೊಳ್ಳುತ್ತೇವೆ. ವರ್ತಕರು ಹಾಗೂ ಜನರು ಸಹಕರಿಸುವ ಮೂಲಕ ಬಂದ್‌ ಅನ್ನು ಯಶಸ್ವಿಗೊಳಿಸಬೇಕು ಎಂದರು.

ಡಿಎಸ್‌ಎಸ್‌ ಮುಖಂಡರಾದ ಅರವಿಂದ ಸಾಲವಾಡಗಿ, ಅಶೋಕ ಚಲವಾದಿ, ಕಾಂಗ್ರೆಸ್‌ ಬ್ಲಾಕ್ ಘಟಕದ ಪ್ರಧಾನ ಕಾರ್ಯದರ್ಶಿ ರವಿ ರಾಠೋಡ ಇತರರು ಮಾತನಾಡಿದರು.

ಎಪಿಎಂಸಿ ನಿರ್ದೇಶಕ ಶೇಖರ ಗೊಳಸಂಗಿ, ಪುರಸಭೆ ಸದಸ್ಯ ಸಂಗನ ಬಸು ಪೂಜಾರಿ, ವಿವಿಧ ಸಂಘಟನೆಯ ಮುಖಂಡರಾದ ಜಟ್ಟಿಂಗ ರಾಯ ಮಾಲಗಾರ, ಬಸವರಾಜ ಕೋಟಿ, ಶ್ರೀಕಾಂತ ಪಡಶೆಟ್ಟಿ, ರಾಜು ಫಿರಂಗಿ, ಸಂಜು ಬಿರಾದಾರ, ರಾಜು ಮೋದಿ, ಸುರೇಶ ಹೂಗಾರ ಮತ್ತಿತರರು ಇದ್ದರು.

*
ಮಹಾಪುರುಷರ ಪುತ್ಥಳಿ ಇರುವ ಸ್ಥಳದಲ್ಲಿ ಸಿ.ಸಿ ಟಿವಿ ಕ್ಯಾಮರಾ ಅಳವಡಿಸಬೇಕು. ಸಮಾಜದ ಶಾಂತಿ ಕದಡುವವರ ವಿರುದ್ದ ಕ್ರಮ ಕೈಗೊಳ್ಳಬೇಕು.
–ಸುರೇಶ ಮಣ್ಣೂರ,
ಡಿಎಸ್‌ಎಸ್‌ ಮುಖಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT