ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರು ಒದಗಿಸಲು ಆದ್ಯತೆ ನೀಡಿ

ಶಿಕಾರಿಪುರ: ಗ್ರಾಮ ಪಂಚಾಯ್ತಿ ಕಾರ್ಯದರ್ಶಿ, ಪಿಡಿಒಗಳಿಗೆ ಶಾಸಕ ಬಿ.ವೈ.ರಾಘವೇಂದ್ರ ಸಲಹೆ
Last Updated 19 ಜನವರಿ 2017, 6:06 IST
ಅಕ್ಷರ ಗಾತ್ರ

ಶಿಕಾರಿಪುರ: ‘ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು’ ಎಂದು ಶಾಸಕ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸಲಹೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳ ಕಾರ್ಯದರ್ಶಿ ಹಾಗೂ ಪಿಡಿಒಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತಾಲ್ಲೂಕಿನಲ್ಲಿ ಆವರಿಸಿರುವ ಭೀಕರ ಬರಗಾಲವನ್ನು ಅಧಿಕಾರಿಗಳು ಸಮರ್ಥವಾಗಿ ಎದುರಿಸಬೇಕು. ಕುಡಿಯುವ ನೀರಿಗೆ ಆದ್ಯತೆ ನೀಡುವ ಮೂಲಕ ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಪ್ರಾಮಾಣಿಕ ಪಯತ್ನ ನಡೆಸಬೇಕು. ಖಾಸಗಿ ಕೊಳವೆಬಾವಿ ಮಾಲೀಕರ ಮನವೊಲಿಸಿ ನೀರು ಪಡೆದು ಗ್ರಾಮದ ಜನರಿಗೆ ನೀಡಬೇಕು’ ಎಂದು ಸಲಹೆ ನೀಡಿದರು.

‘ತಾಲ್ಲೂಕಿನ ಜನತೆ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ನನ್ನ ಮನೆ ಬಾಗಿಲಿಗೆ ಬರುವ ಪರಿಸ್ಥಿತಿ ನಿರ್ಮಾಣ ಆಗಬಾರದು. 14ನೇ ಹಣಕಾಸು ಯೋಜನೆಯ ಅನುದಾನವನ್ನು ಕುಡಿಯುವ ನೀರಿಗೆ ಮಾತ್ರ ಬಳಸಲು ಆದ್ಯತೆ ನೀಡಬೇಕು. ಗ್ರಾಮಗಳಲ್ಲಿ ನೀರು ಪೋಲಾಗದಂತೆ ಎಚ್ಚರವಹಿಸಬೇಕು. ಅಧಿಕಾರಿಗಳು ತಾಲ್ಲೂಕು ಕೇಂದ್ರದಲ್ಲಿ ನೆಲೆಸಿ ಜನರ ಸಮಸ್ಯೆ ಅರ್ಥ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ಸಾಗರ ಉಪ ವಿಭಾಗಾಧಿಕಾರಿ ಸತೀಶ್‌ಕುಮಾರ್‌ ಮಾತನಾಡಿ, ‘ಅಧಿಕಾರಿಗಳು ಬರಗಾಲವನ್ನು ಎದುರಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಗ್ರಾಮಗಳಲ್ಲಿ ನೀರಿನ ತೊಂದರೆ ಆಗುವ ಮುನ್ನ ಎಚ್ಚರ ವಹಿಸಬೇಕು. ನೀರಿನ ಮೂಲಗಳ ಪಟ್ಟಿ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
‘ಉದ್ಯೋಗ ಖಾತ್ರಿ ಯೋಜನೆ ಮೂಲಕ ಜನರಿಗೆ ಉದ್ಯೋಗ ನೀಡಬೇಕು’ ಎಂದು ಸಲಹೆ ನೀಡಿದ ಅವರು, ‘ಈ ಬಾರಿ ಬೆಳೆ ಪರಿಹಾರ ನೇರವಾಗಿ ರೈತರ ಖಾತೆಗೆ ಜಮಾ ಆಗಲಿದೆ’ ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್‌ ಬಿ.ಶಿವಕುಮಾರ್‌, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಪರಮೇಶ್ವರಪ್ಪ, ಸದಸ್ಯ ಆರ್‌್.ಕೆ.ಶಂಭು, ಇಒ ಆನಂದ್‌ಕುಮಾರ್‌, ಗ್ರಾಮೀಣ ನೀರು ಸರಬರಾಜು ಹಾಗೂ ನೈರ್ಮಲ್ಯ ವಿಭಾಗದ ಸಹಾಯಕ ಎಂಜಿನಿಯರ್ ವಿಷ್ಣು ತಾಳೇಕಾರ್‌ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT