ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಸಿ ಪ್ರಣಾಳಿಕೆ

Last Updated 19 ಜನವರಿ 2017, 19:30 IST
ಅಕ್ಷರ ಗಾತ್ರ

ರಾಜಕೀಯ ಪಕ್ಷಗಳು ಚುನಾವಣೆಗೆ ಮೊದಲು ಪ್ರಣಾಳಿಕೆಗಳನ್ನು ಬಿಡುಗಡೆ ಮಾಡುವುದು ಸಾಮಾನ್ಯ. ಆದರೆ ಚುನಾವಣೆಯ ನಂತರ ಅವು ತಮ್ಮ ಪ್ರಣಾಳಿಕೆಗಳಲ್ಲಿನ ಎಷ್ಟೋ ಭರವಸೆಗಳನ್ನು ಈಡೇರಿಸದೆ, ಐದು ವರ್ಷಗಳ ಅವಧಿಯಲ್ಲಿ ಜನಸಾಮಾನ್ಯರ ನಿರೀಕ್ಷೆಗಳನ್ನು ಹುಸಿಗೊಳಿಸುತ್ತವೆ.

ಹೀಗಾಗಿ ರಾಜಕೀಯ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಚುನಾವಣಾ ಆಯೋಗದ ಒಪ್ಪಿಗೆ ಪಡೆಯಬೇಕೆಂಬ ಕಾನೂನನ್ನು ಜಾರಿಗೊಳಿಸಬೇಕು. ಅಂದಾಗ ಮಾತ್ರ ಪಕ್ಷಗಳು ಜನರಿಗೆ ಹುಸಿ ಭರವಸೆ ಕೊಡುವುದನ್ನು ನಿಲ್ಲಿಸಬಹುದು. ಇಂತಹ ಭರವಸೆಗಳು ಅನಕ್ಷರಸ್ಥರ ಮೇಲೆ ಅಗಾಧ ಪರಿಣಾಮ ಬೀರುತ್ತವೆ. ಹೀಗೆ  ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬರುವುದು ಕೂಡ ಜನಸಾಮಾನ್ಯರಿಗೆ ಮೋಸ ಮಾಡಿದಂತೆ.
-ಶೇಖರಾಜ ರಾಮಪ್ಪ ಧುತ್ತರಗಿ, ಶೂಲೇಭಾವಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT