ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ ಗಸ್ತು ವಾಹನಗಳಿಗೆ ಚಾಲನೆ

ಅಪರಾದ ನಿಯಂತ್ರಣದ ಆಶಾವಾದ
Last Updated 20 ಜನವರಿ 2017, 7:33 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಹಾದು ಹೋಗುವ ನಾಲ್ಕು ಹೆದ್ದಾರಿಗಳಲ್ಲಿ ನಿರಂತರ ಗಸ್ತು ತಿರುಗಲು ನಾಲ್ಕು ಹೊಸ ಇನ್ನೋವಾ ವಾಹನಗಳಿಗೆ ಗುರುವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಶಾ ಪಂಥ್‌ ಚಾಲನೆ ನೀಡಿದರು.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಇಶಾ ಪಂಥ್‌, ’ಹೆದ್ದಾರಿಗಳಲ್ಲಿ ಗಸ್ತು ಹೆಚ್ಚಿಸುವುದರಿಂದ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಬಹುದಾಗಿದೆ. ಅಪಘಾತ ಸಂದರ್ಭಗಳಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ, ತಕ್ಷಣ ಆಸ್ಪತ್ರೆ ಸೇರಿಸಲು ಅನುಕೂಲ ಕಲ್ಪಿಸಲಾಗಿದೆ. ಸ್ಟ್ರೇಚರ್‌ ಹಾಗೂ ಪ್ರಥಮ ಚಿಕಿತ್ಸೆ ವ್ಯವಸ್ಥೆಯೂ ಇರಲಿದೆ’ ಎಂದು ಹೇಳಿದರು.

ಹೆದ್ದಾರಿ ಸುರಕ್ಷತಾ ಯೋಜನೆಯಡಿ ರಾಜ್ಯವ್ಯಾಪಿ ಹೆದ್ದಾರಿಗಳಲ್ಲಿ ಗಸ್ತು ಕರ್ತವ್ಯಕ್ಕೆ 100 ಇನ್ನೋವಾ ವಾಹನಗಳನ್ನು ಖರೀದಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ನಂದಿಹಳ್ಳಿ ಗಡಿಯಿಂದ ಸೀಬಿವರೆಗೆ, ಸೀಬಿಯಿಂದ ಶಿರಾದ ತಾವರೆಕೆರೆ ಗಡಿ, ರಾಷ್ಟ್ರೀಯ ಹೆದ್ದಾರಿ 75ರ ಕುಣಿಗಲ್‌ ಅಂಚೆಪಾಳ್ಯದಿಂದ ಎಡೆಯೂರು ಗೋಂದಿಹಳ್ಳಿ, ರಾಷ್ಟ್ರೀಯ ಹೆದ್ದಾರಿ 206ರ ತುಮಕೂರಿನಿಂದ ತಿಪಟೂರಿನ ಕೊನೆಹಳ್ಳಿ ಗಡಿಯವರೆಗೆ ನಿಯೋಜಿಸಲಾಗಿದೆ. ಈ ವಾಹನಗಳು 24 ಗಂಟೆಗಳ ಕಾಲ ಗಸ್ತು ತಿರುಗಲಿವೆ. ಗಸ್ತು ವಾಹನದಲ್ಲಿ ಪಿಟಿ ಝಡ್‌ ಕ್ಯಾಮೆರಾ ಕೂಡ ಅಳವಡಿಸಲಾಗಿದೆ.

ಬೈಕ್‌ ಸವಾರರಿಗೆ ಗುಲಾಬಿ ಹೂವು
ಹೆಲ್ಮೆಟ್‌ ಜಾಗೃತಿ ಮೂಡಿಸುವ ಸಲುವಾಗಿ ಬೈಕ್‌ ಸವಾರರಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಶಾ ಪಂಥ್‌ ಅವರು ಗುಲಾಬಿ ಹೂವು ನೀಡಿ ಪ್ರೋತ್ಸಾಹಿಸಿದರು. ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡಿದವರಿಂದ ದಂಡ ವಸೂಲಿ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT