ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನರಾ ಬ್ಯಾಂಕ್‌ ಗೆ ಲಾಭ

Last Updated 20 ಜನವರಿ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದಲ್ಲಿ ರಾಷ್ಟ್ರೀಕೃತ ಕೆನರಾ ಬ್ಯಾಂಕ್‌ನ ನಿವ್ವಳ ಲಾಭ ₹ 322 ಕೋಟಿಗಳಷ್ಟಾಗಿದೆ. ‘2015–16ರ ಅಕ್ಟೋಬರ್‌–ಡಿಸೆಂಬರ್‌ ತ್ರೈಮಾಸಿಕದಲ್ಲಿ ₹85 ಕೋಟಿ ನಿವ್ವಳ ಲಾಭ ಗಳಿಸಿತ್ತು. ಅದಕ್ಕೆ ಹೋಲಿಕೆ ಮಾಡಿದರೆ ಲಾಭದಲ್ಲಿ ಮೂರು ಪಟ್ಟು ಹೆಚ್ಚಳವಾಗಿದೆ’  ಎಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ರಾಕೇಶ್‌ ಶರ್ಮಾ  ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆದರೆ, ಪ್ರಸಕ್ತ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕದಲ್ಲಿದ್ದ ₹357 ಕೋಟಿ ನಿವ್ವಳ ಲಾಭಕ್ಕೆ ಹೋಲಿಸಿದರೆ ಲಾಭವು ₹35 ಕೋಟಿಗಳಷ್ಟು ತಗ್ಗಿದೆ. ವರಮಾನ ಅಲ್ಪ ಏರಿಕೆ:ಒಟ್ಟು ವರಮಾನ ₹12,051 ಕೋಟಿಗಳಿಂದ ₹12,079 ಕೋಟಿಗಳಿಗೆ ಅಲ್ಪ ಏರಿಕೆ ಕಂಡಿದೆ.

ಸರಾಸರಿ ವಸೂಲಿಯಾಗದ ಸಾಲದ ಪ್ರಮಾಣ (ಎನ್‌ಪಿಎ) ಶೇ 5.84 ರಿಂದ ಶೇ 9.97ಕ್ಕೆ ಮತ್ತು ನಿವ್ವಳ ಎನ್‌ಪಿಎ ಶೇ 2.42 ರಿಂದ ಶೇ 6.72ಕ್ಕೆ
ಏರಿಕೆಯಾಗಿದೆ. ಆರ್ಥಿಕ ವರ್ಷದ ಒಂಬತ್ತು ತಿಂಗಳಿನಲ್ಲಿ ಬ್ಯಾಂಕ್‌ ವರಮಾನ ₹36,781 ಕೋಟಿಗಳಿಂದ ₹36,053 ಕೋಟಿಗಳಿಗೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT