ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಕುವೆಂಪು ಜನ್ಮ ದಿನಾಚರಣೆ

Last Updated 21 ಜನವರಿ 2017, 5:04 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ವಚನ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ವತಿಯಿಂದ ಜ. 21ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್‌ ಭವನದಲ್ಲಿ ಕುವೆಂಪು ಅವರ 112ನೇ ಜನ್ಮದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ವಚನ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಬಿ.ಹನುಮಂತಪ್ಪ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ‘ನಾಡಿಗೆ ವಿಶ್ವಮಾನವ ಸಂದೆಶವನ್ನು ಕೊಟ್ಟ ಕುವೆಂಪು ನಮ್ಮ ಹೆಮ್ಮೆ. ಅಂತಹ ಮಹಾನ್ ಸಾಹಿತಿಯ ಜನ್ಮದಿನಾಚರಣೆಯನ್ನು ಮಾಡುವ ಮೂಲಕ ಅವರ ಆದರ್ಶಗಳನ್ನು ಜನರಿಗೆ ತಿಳಿಸಿ, ಬದುಕಿನಲ್ಲಿ ಅಳವಡಿಸಿಕೊಳ್ಳುವಂತೆ ಮಾಡಬೇಕಿದೆ’ ಎಂದು ತಿಳಿಸಿದರು.

ವಚನ ಸಾಹಿತ್ಯ ಪರಿಷತ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಅಗಲಗುರ್ಕಿ ಚಲಪತಿ ಮಾತನಾಡಿ, ‘ಗಡಿನಾಡಿನಲ್ಲಿ ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಭಾಷಾ ಪ್ರೇಮವನ್ನು ಜನರಲ್ಲಿ ಮೂಡಿಸಬೇಕಿದೆ. ಕನ್ನಡ ನಾಡು, ನುಡಿಗಾಗಿ ಕುವೆಂಪು ಅವರ ಸೇವೆ ಅಪಾರವಾದದ್ದು. ಅಂತಹ ಮಹನೀಯರ ಜನ್ಮದಿನಾಚರಣೆಯನ್ನು ಜಾತಿ, ಮತ ಭೇದವಿಲ್ಲದೆ ನಾವೆಲ್ಲ ಒಂದುಗೂಡಿ ಆಚರಿಸಬೇಕಿದೆ’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುವೆಂಪು ಅವರ ಕುರಿತು ವಿಮರ್ಶಕ ಎಂ.ಜಿ.ಚಂದ್ರಶೇಖರಯ್ಯ ಉಪನ್ಯಾಸ ನೀಡಲಿದ್ದಾರೆ. ಮಂಗಳಾನಂದ ನಾಥ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ, ಶಾಸಕ ಕೆ.ಸುಧಾಕರ್, ವಚನ ಸಾಹಿತ್ಯ ಪರಿಸತ್‌ ರಾಜ್ಯ ಘಟಕದ ಅಧ್ಯಕ್ಷ ಎಂ.ವಿ.ತ್ಯಾಗರಾಜು ಮುಂತಾದವರು ಭಾಗವಹಿಸುತ್ತಾರೆ ಎಂದು ತಿಳಿಸಿದರು.

ವಚನ ಸಾಹಿತ್ಯ ಪರಿಷತ್‌ ರಾಜ್ಯ ಘಟಕದ ಉಪಾಧ್ಯಕ್ಷ ನವಮೋಹನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಲಕ್ಷ್ಮಣರೆಡ್ಡಿ, ಮಹಿಳಾ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷೆ ರೇಣುಕಮ್ಮ ಮುಂತಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT