ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಆತ್ಮಹತ್ಯೆ ತಡೆಗೆ ಜಾಗೃತಿ ಕಾರ್ಯಕ್ರಮ

ಜಿಲ್ಲಾಡಳಿತ ರೈತರ ಜತೆಗೆ ಇದೆ: ಜಿಲ್ಲಾಧಿಕಾರಿ ಜಿ.ಸತ್ಯವತಿ
Last Updated 21 ಜನವರಿ 2017, 5:52 IST
ಅಕ್ಷರ ಗಾತ್ರ

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ರೈತರ ಆತ್ಮ ಹತ್ಯೆ ತಡೆಯಲು ಜಿಲ್ಲಾಡಳಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ.ಸತ್ಯವತಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣ ದಲ್ಲಿ ಜಿಲ್ಲೆಯ ರೈತರ ಆತ್ಮಹತ್ಯೆ ಪ್ರಕರ ಣಗಳ ಕುರಿತು ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ರೈತರು ದೇಶದ ಬೆನ್ನೆಲುಬು. ಅವರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿ ಕೊಳ್ಳಬಾರದು. 2015ರ ಜನವರಿ ಯಿಂದ ಡಿಸೆಂಬರ್ ಅಂತ್ಯದ ವರೆಗೆ ಜಿಲ್ಲೆಯಲ್ಲಿ 50, 2016ರ ಜನವರಿ ಯಿಂದ ಡಿಸೆಂಬರ್ ಮಾಹೆಯ ಅಂತ್ಯಕ್ಕೆ 70ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಕಡೂರು ತಾಲ್ಲೂಕಿನಲ್ಲಿ ಡಿಸೆಂಬರ್ ಮಾಹೆಯಲ್ಲಿ 9 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಹಿಡಿ ಕುಟುಂಬ ನಷ್ಟ ಅನುಭವಿಸುವುದರಿಂದ  ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಹಾದಿ ತುಳಿಯಬಾರದು ಎಂದರು.

ರೈತರೊಂದಿಗೆ ಜಿಲ್ಲಾಡಳಿತವಿದೆ. ತಮಗೆ ಯಾವುದೇ ಸಮಸ್ಯೆ ಎದುರಾದರು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಈಗಾಗಲೆ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಕೂಡಲೇ ಸರ್ಕಾರ ದಿಂದ ನೀಡುವ ಸವಲತ್ತುಗಳನ್ನು ವಿತರಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಖಾಸಗಿ ಲೇವಾದೇವಿ ದಾರರು ಸರ್ಕಾರ ನಿಗಧಿಪಡಿಸಿರುವ ಬಡ್ಡಿಗಿಂತ ರೈತರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಬ್ಯಾಂಕ್‌ಗಳು ರೈತರಿಗೆ ನೀಡಿರುವ ಸಾಲ ವಸೂಲಿಗೆ ಸಂಬಂಧಿಸಿದಂತೆ ಒತ್ತಡ ಹಾಕಬಾರದು ಎಂದು ತಿಳಿಸಿದರು. 

ಉಪವಿಭಾಗಾಧಿಕಾರಿ ಅಧ್ಯಕ್ಷತೆ ಯಲ್ಲಿ ತಯಾರಿಸಿದ ವರದಿ ಅನ್ವಯ  ಮರಣ ಹೊಂದಿದ ರೈತರ ಕುಟುಂಬದ ರೈತನ ಪತ್ನಿಗೆ ₹2 ಸಾವಿರ ಮಾಸಾಶನ, ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ವ್ಯವಸ್ಥೆ, ರೈತರು ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದರು.

ತಾಲ್ಲೂಕುಗಳಲ್ಲಿ ತಹಸೀಲ್ದಾರ್‌ ಅವರ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ರೈತರು ತಮ್ಮ ಅಹವಾಲು ನೀಡಿ ಸಮಸ್ಯೆ ಗಳನ್ನು ಪರಿಹರಿಸಿಕೊ ಳ್ಳಬಹುದು. ರೈತರು ತಮ್ಮ ಕೆಲಸಗಳಿಗೆ ಯಾವುದೇ ಕಚೇರಿಗೆ ಭೇಟಿ ನೀಡಿದಾಗ ಶೀಘ್ರವಾಗಿ ಮಾಡಿಕೊಡಬೇಕು.

ರೈತರು ಸಮಸ್ಯೆಗೆ ಸಂಬಂಧಿಸಿದಂತೆ 100,  08262-235608 ಅಥವಾ 9480805100 ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ,  ಎಸ್‌ಪಿ ಕೆ. ಅಣ್ಣಾಮಲೈ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸೀತಾ,ರೈತ ಸಂಘದ ಮುಖಂಡರು ಇದ್ದರು.

*
ರೈತರ ಆತ್ಮಹತ್ಯೆಗೆ ಸಂಬಂಧಿಸಿ ದಂತೆ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬ ಪರಿಶೀ ಲಿಸಿ ಪರಿಹಾರ ನೀಡಲಾಗುವುದು.
–ಜಿ.ಸತ್ಯವತಿ, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT