ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ಸರಣಿ ವೈಟ್‌ವಾಷ್‌ ಆತಂಕದಲ್ಲಿ ಇಂಗ್ಲೆಂಡ್‌

Last Updated 21 ಜನವರಿ 2017, 10:46 IST
ಅಕ್ಷರ ಗಾತ್ರ

ಕೊಲ್ಕತ್ತಭಾರತ ಈಗಾಗಲೇ ಸರಣಿ ವಶಪಡಿಸಿಕೊಂಡಿದ್ದು, ವೈಟ್‌ವಾಷ್‌ನಿಂದ ಪಾರಾಗಲು ಭಾನುವಾರ ಕೊಲ್ಕತ್ತದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಅಂತಿಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್‌ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಪ್ರವಾಸಿ ಇಂಗ್ಲೆಂಡ್‌ ತಂಡದ ವಿರುದ್ಧ ಟೆಸ್ಟ್‌ ಹಾಗೂ ಏಕದಿನ ಸರಣಿಗಳೆರಡನ್ನು ಭಾರತ ಗೆದ್ದುಕೊಂಡಿದೆ. ಎರಡನೇ ಏಕದಿನ ಪಂದ್ಯದಲ್ಲಿ ಯುವರಾಜ್‌ ಸಿಂಗ್‌, ಎಂಎಸ್‌ ದೋನಿ ಅವರ ಅಮೋಘ ಜೊತೆಯಾಟದಿಂದ ತಂಡ ಬೃಹತ್‌ ಮೊತ್ತ ಪೇರಿಸಿದ್ದ ಕಾರಣ 15 ರನ್‌ಗಳ ಅಂತರದಿಂದ ಭಾರತ ಗೆಲುವು ಸಾಧಿಸಿತ್ತು.

ಆರಂಭಿಕ ಆಟಗಾರರಾದ ಕೆ.ಎಲ್‌. ರಾಹುಲ್‌ ಹಾಗೂ ಶಿಖರ್‌ ಧವನ್‌ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದರು. ಶುಕ್ರವಾರ ಅಭ್ಯಾಸದ ವೇಳೆ ಧವನ್‌ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಧವನ್‌ ಅನುಪಸ್ಥಿಯಲ್ಲಿ ಅಜಿಂಕ್ಯ ರಹಾನೆ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.

ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ತಂಡದಿಂದ ದೂರ ಉಳಿದಿದ್ದಾರೆ. 2014ರ ನವೆಂಬರ್‌ 13ರಂದು ಶ್ರೀಲಂಕಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ರೋಹಿತ್‌ ಶರ್ಮಾ 264ರನ್‌ ಗಳಿಸುವ ಮೂಲಕ ಇನಿಂಗ್ಸ್‌ವೊಂದರಲ್ಲಿ ವೈಯಕ್ತಿಕ ಗರಿಷ್ಠ ಮೊತ್ತ ದಾಖಲಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

ಭಾರತ– ಇಂಗ್ಲೆಂಡ್‌ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ನಾಯಕ ಕೊಹ್ಲಿ ಯಾರಿಗೆ ಅವಕಾಶ ನೀಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT