ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲವಿದ್ಯುತ್‌ ಯೋಜನೆ ತಡೆಯಲು ಪಾಕ್‌ ಒತ್ತಾಯ

Last Updated 21 ಜನವರಿ 2017, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ ನಿರ್ಮಿಸುತ್ತಿರುವ ಕಿಶನ್‌ಗಂಗಾ ಮತ್ತು ರ್‍್ಯಾಟಲ್‌ ಜಲವಿದ್ಯುತ್‌ ಯೋಜನೆಗಳನ್ನು ಸ್ಥಗಿತಗೊಳಿಸಬೇಕು ಎಂದು ಪಾಕಿಸ್ತಾನ ಒತ್ತಾಯಿಸಿದೆ.

ಭಾರತದೊಂದಿಗಿನ ಜಲವಿವಾದದ ಕುರಿತು ಚರ್ಚಿಸಲು ಪಾಕಿಸ್ತಾನ ರಚಿಸಿದ್ದ ಎರಡು ಸಂಸದೀಯ ಸಮಿತಿಗಳ ಜಂಟಿ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದೂ ಸಭೆ  ಒತ್ತಾಯಿಸಿದೆ.  

ವಿಶ್ವಸಂಸ್ಥೆ ಮಧ್ಯಪ್ರವೇಶಿಸಿ, ಸಮಸ್ಯೆ ಇತ್ಯರ್ಥವಾಗುವವರೆಗೂ ರ್‍್ಯಾಟಲ್‌ ಯೋಜನೆಯನ್ನು ನಿಲ್ಲಿಸುವುದು ಸೂಕ್ತ ಎಂಬುದನ್ನು  ಭಾರತಕ್ಕೆ ಮನವರಿಕೆ ಮಾಡಬೇಕು ಎಂದು ಸಭೆ ನಿರ್ಣಯ ಕೈಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ‘ಸಿಂಧೂ ನದಿ ನೀರು ಒಪ್ಪಂದವನ್ನು ಮುರಿಯಲು ಭಾರತಕ್ಕೆ ನಾವು ಅವಕಾಶ ನೀಡುವುದಿಲ್ಲ’ ಎಂದು ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಐಜಾಜ್‌ ಚೌಧರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT