ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆ ಸಾಧ್ಯತೆ

Last Updated 21 ಜನವರಿ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಜ. 21ರಿಂದ ಎರಡು ದಿನ ರಾಜ್ಯದ  ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.

‘ಹಿಂದೂ ಮಹಾಸಾಗರದ ಸಮಭಾಜಕ ವೃತ್ತದಿಂದ ಬಂಗಾಳಕೊಲ್ಲಿ ನೈರುತ್ಯದವರೆಗೆ ಗಾಳಿ ಒತ್ತಡ ಹೆಚ್ಚಿದೆ. ಅದರಿಂದಾಗಿ ಬೆಂಗಳೂರು, ಮಂಡ್ಯ, ಹಾಸನ, ತುಮಕೂರು, ಚಾಮರಾಜನಗರ, ಕೋಲಾರ ಸೇರಿದಂತೆ ಹಲವು ನಗರಗಳಲ್ಲಿ ಎರಡು ದಿನಗಳವರೆಗೆ ಮೋಡ ಕವಿದ ವಾತಾವರಣವಿರಲಿದೆ’ ಎಂದು ಹವಾಮಾನ ಇಲಾಖೆಯ ನಿರ್ದೇಶಕ (ಪ್ರಭಾರ) ಸುಂದರ್‌ ಎಂ. ಮೇತ್ರಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ವಾಯುಭಾರ ಕುಸಿತದಿಂದ ಶನಿವಾರ ಕೆಲ ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಜ.22 ಹಾಗೂ ಜ.23ರಂದೂ ಕೆಲವೆಡೆ ತುಂತುರು ಮಳೆಯಾಗಲಿದೆ. ಇನ್ನು ಹಲವೆಡೆ ಮಳೆಯಾಗದೆ ಕೇವಲ ಮೋಡ ಕವಿದ ವಾತಾವರಣವಷ್ಟೇ ಇರಲಿದೆ’ ಎಂದರು.

ಚಳಿ ಮುಂದುವರಿಕೆ: ‘ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದಿಂದ ತಾಪಮಾನದಲ್ಲಿ ಇಳಿಕೆ ಕಂಡುಬರಲಿದೆ. ಅದರಿಂದ ಚಳಿ ಮತ್ತಷ್ಟು ಹೆಚ್ಚಾಗಲಿದೆ’ ಎಂದು ಸುಂದರ್‌ ತಿಳಿಸಿದರು. ‘ಕಳೆದ ವಾರವಷ್ಟೇ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್‌ ಆಗಿತ್ತು. ಮುಂದಿನ ಎರಡು ದಿನಗಳಲ್ಲಿ ಅದರ ಪ್ರಮಾಣವು ಶೇ 2ರಷ್ಟು ಇಳಿಕೆಯಾಗಬಹುದು’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT