ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅತೃಪ್ತರು ಕಾಂಗ್ರೆಸ್‌ನತ್ತ: ದಿನೇಶ್‌

Last Updated 21 ಜನವರಿ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಜೆಪಿಯ ಹಲವು ಅತೃಪ್ತರು ಕಾಂಗ್ರೆಸ್‌ ಪಕ್ಷ ಸೇರಲು ಸಿದ್ಧರಾಗಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್‌ ಹೇಳಿದರು.
‘ಬಿಜೆಪಿ ಈಗ ಒಡೆದ ಮನೆ. ಯಡಿಯೂರಪ್ಪ ನೇತೃತ್ವವನ್ನು ಒಪ್ಪಿಕೊಳ್ಳಲು ಅನೇಕರು ಸಿದ್ಧರಿಲ್ಲ’ ಎಂದು ಮಾಧ್ಯಮಗೋಷ್ಠಿಯಲ್ಲಿ ಶನಿವಾರ  ತಿಳಿಸಿದರು.

ವಿಧಾನಪರಿಷತ್‌ ಸದಸ್ಯ ಬಿಜೆಪಿಯ ವಿ. ಸೋಮಣ್ಣ ಕಾಂಗ್ರೆಸ್‌ ಸೇರಲು ಯತ್ನಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಯಡಿಯೂರಪ್ಪ ನಾಯಕತ್ವದಿಂದ ಬೇಸತ್ತ ಹಲವು ಬಿಜೆಪಿ ಮುಖಂಡರು ಸಂಪರ್ಕದಲ್ಲಿದ್ದಾರೆ. ಈ ವಿಷಯದಲ್ಲಿ ಪಕ್ಷ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದರು.

ನಂಜನಗೂಡು ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ವಿಳಂಬ ಆಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಉಪ ಚುನಾವಣೆಯ ದಿನಾಂಕ ಪ್ರಕಟವಾಗುತ್ತಿದ್ದಂತೆ ಪಕ್ಷದ ಅಭ್ಯರ್ಥಿ ಹೆಸರು ಪ್ರಕಟಿಸಲಾಗುವುದು. ಅಭ್ಯರ್ಥಿಗೆ ಕೊರತೆಯೇನೂ ಇಲ್ಲ’ ಎಂದೂ ಅವರು ಸ್ಪಷ್ಟಪಡಿಸಿದರು.

ಎಪಿಎಂಸಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆದ್ದಿದ್ದಾರೆ. ಇದು 2018ರಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಸೂಚನೆ ಎಂದರು.

ಎಪಿಎಂಸಿ ಒಟ್ಟು 1,760  ಸ್ಥಾನಗಳ ಪೈಕಿ 769 ಸ್ಥಾನಗಳಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ. ಉಳಿದಂತೆ, ಬಿಜೆಪಿ ಬೆಂಬಲಿತರು 608 ಮತ್ತು ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು 298 ಸ್ಥಾನಗಳಲ್ಲಿ ಜಯ ಗಳಿಸಿದ್ದಾರೆ. 2011ರ ಎಪಿಎಂಸಿ ಚುನಾವಣೆಗೆ ಹೋಲಿಸಿದರೆ ಈ ಬಾರಿ ಪಕ್ಷದ ಸಾಧನೆ ಸುಧಾರಿಸಿದೆ’ ಎಂದೂ ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT