ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ: ಗ್ರೂಪ್‌ ಎ, ಬಿ, ಸಿ 265 ಹೆಚ್ಚುವರಿ ಹುದ್ದೆಗಳು

Last Updated 22 ಜನವರಿ 2017, 11:36 IST
ಅಕ್ಷರ ಗಾತ್ರ

ಬೆಂಗಳೂರು:  ಗ್ರೂಪ್‌ ಎ, ಬಿ ಮತ್ತು ಸಿ ತಾಂತ್ರಿಕ/ತಾಂತ್ರಿಕೇತರ ಹುದ್ದೆಗಳಿಗೆ ಹೆಚ್ಚುವರಿಯಾಗಿ 265 ಹುದ್ದೆಗಳನ್ನು ಕೆಪಿಎಸ್‌ಸಿ ಸೇರ್ಪಡೆಗೊಳಿಸಿದ್ದು, ಅರ್ಜಿ ಸಲ್ಲಿಕೆ ಕೊನೆಯ ದಿನವನ್ನು ವಿಸ್ತರಿಸಲಾಗಿದೆ.

ರಾಜ್ಯದ ವಿವಿಧ ಇಲಾಖೆ, ಮಹಾವಿದ್ಯಾಲಯಗಳು ಹಾಗೂ ಶಾಲಾ–ಕಾಲೇಜುಗಳಲ್ಲಿ ಅಗತ್ಯವಿರುವ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕ ಸೇವಾ ಆಯೋಗ(ಕೆಪಿಎಸ್‌ಸಿ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 1203 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಸಲು 2016ರ ಡಿಸೆಂಬರ್‌ 17ರಂದು ಅಧಿಸೂಚನೆ ಪ್ರಕಟಿಸಿತ್ತು. ಮತ್ತೆ, 265 ಹೆಚ್ಚುವರಿ ಹುದ್ದೆಗಳನ್ನು ಸೇರ್ಪಡೆಗೊಳಿಸಿರುವುದಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಗ್ರೂಪ್‌ ಎ, ಬಿ ಮತ್ತು ಸಿ ತಾಂತ್ರಿಕ/ತಾಂತ್ರಿಕೇತರ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಕೆಪಿಎಸ್‌ಸಿ ಆಯ್ಕೆ ನಡೆಸುತ್ತಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ಫೆಬ್ರುವರಿ 13ರ ವರೆಗೂ ವಿಸ್ತರಿಸಲಾಗಿದೆ.

ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೊಮಾ ಸೇರಿದಂತೆ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಯಾಗಿದೆ. ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದಾಗಿದೆ.

ವೆಬ್‌ಸೈಟ್‌: kpsc.kar.nic.in

=========
ಒಟ್ಟು ಹುದ್ದೆ– 1203+265

ಅರ್ಜಿ ಶುಲ್ಕ: ಸಾಮಾನ್ಯ ವರ್ಗ–₹300, ಇತರೆ ಹಿಂದುಳಿದ ವರ್ಗ–₹150 ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ₹25

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT