ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಸಾಚಾರಕ್ಕೆ ತಿರುಗಿದ ಜಲ್ಲಿಕಟ್ಟು ಪ್ರತಿಭಟನೆ

ಪೊಲೀಸ್‌ ಠಾಣೆಗೆ ಬೆಂಕಿ
Last Updated 23 ಜನವರಿ 2017, 7:12 IST
ಅಕ್ಷರ ಗಾತ್ರ

ಚೆನ್ನೈ: ಜಲ್ಲಿಕಟ್ಟು ಕ್ರೀಡೆ ನಡೆಸಲು ವಿಶೇಷ ಕಾನೂನು ರೂಪಿಸಬೇಕೆಂದು ಒತ್ತಾಯಿಸಿ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರದ ಸ್ವರೂಪ ಪಡೆದಿದೆ.

ಚೆನ್ನೈನ ಮರೀನಾ ಬೀಚ್‌ನಲ್ಲಿದ್ದ ಪ್ರತಿಭಟನಾನಿರತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಈ ವೇಳೆ ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಉದ್ರಿಕ್ತರು ಮರೀನಾ ಬೀಚ್‌ ಸಮೀಪದ ಐಸ್‌ ಹೌಸ್‌ ಪೊಲೀಸ್‌ ಠಾಣೆಗೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಮರೀನಾ ಬೀಚ್‌ ಕಡೆಗೆ ಹೋಗುವ ಎಲ್ಲಾ ರಸ್ತೆಗಳನ್ನು ಬಂದ್‌ ಮಾಡಲಾಗಿದೆ. ಬೀಚ್‌ನ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಹನ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದೆ.

ಚೆನ್ನೈ ಮಾತ್ರವಲ್ಲದೆ ಮಧುರೈ, ಕೊಯಮತ್ತೂರು ಸೇರಿದಂತೆ ಹಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಘಟನೆಯಲ್ಲಿ ಹಲವು ಪ್ರತಿಭಟನಾಕಾರರು ಹಾಗೂ ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT