ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಯ್ಲರ್ ಸ್ಫೋಟ: ವಿದ್ಯಾರ್ಥಿಗಳ ಪ್ರತಿಭಟನೆ

Last Updated 23 ಜನವರಿ 2017, 9:52 IST
ಅಕ್ಷರ ಗಾತ್ರ

ಯಾದಗಿರಿ: ನಗರದ ಶಶಿ ಸೂಪರ್‌ ಬಜಾರ್‌ ಬಳಿ ಇರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಅಡುಗೆ ಕೊಣೆಯಲ್ಲಿ ಭಾನುವಾರ ಇಡ್ಲಿ ಬಾಯ್ಲಾರ್ ಸ್ಫೋಟಗೊಂಡಿದ್ದು, ಅಡುಗೆ ಸಹಾಯಕನಿಗೆ ಗಾಯಗಳಾಗಿವೆ.

ಘಟನೆ ಸಂಭವಿಸಿದ್ದರೂ ಸಂಬಂಧ ಪಟ್ಟ ಅಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡದೆ ಇರುವ ಕ್ರಮ ಖಂಡಿಸಿ ವಿದ್ಯಾರ್ಥಿಗಳು ವಸತಿ ನಿಲಯದ ಎದುರು ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ವಿದ್ಯಾರ್ಥಿಗಳಿಗೆ ಉಪಾಹಾರಕ್ಕೆ ಇಡ್ಲಿ ಮಾಡಿಕೊಡುವ ವೇಳೆ ಏಕಾಏಕಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಅಡುಗೆ ಸಹಾಯಕ ಮಲ್ಲಿಕಾರ್ಜುನ ಅವರಿಗೆ ಗಾಯವಾಗಿದೆ. ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಅಧಿಕಾರಿಗಳಿಗೆ ಕರೆ ಮಾಡಿ ವಿಷಯ ತಿಳಿಸಲಾಗಿತ್ತು. ಅದಕ್ಕೆ ಅಧಿಕಾರಿಗಳು ಭಾನುವಾರ ರಜೆ ಇರುವುದರಿಂದ ವಸತಿ ನೀಲಯಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ. ಅಧಿಕಾರಿಗಳ ಕಾರ್ಯವೈಖರಿ ಖಂಡಿಸಿ ವಿದ್ಯಾರ್ಥಿಗಳು ಅಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಘಟನೆಯಿಂದಾಗಿ ಬೆಳಿಗ್ಗೆ ವಿದ್ಯಾರ್ಥಿಗಳಿಗೆ ಉಪಾಹಾರ ವ್ಯವಸ್ಥೆಯಾಗಿಲ್ಲ. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳಬೇಕು. ಸ್ಫೋಟದಿಂದ ಹಾನಿಗೊಂಡಿರುವ ಇಡ್ಲಿ ಬಾಯ್ಲರ್ ಬದಲಾಯಿಸಿ ಹೊಸ ಬಾಯ್ಲರ್ ಅಳವಡಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಾದ ಮಲ್ಲಿಕಾರ್ಜುನ, ಸೋಮನಾಥ, ಆನಂದ, ಮಂಜುನಾಥ, ನರಸಪ್ಪ, ಅನಲ್‌್ ಕುಮಾರ್, ನಾಗೇಶ  ಸೇರಿದಂತೆ ಇತರರು  ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT