ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿಯಲ್ಲಿ ಪೊಲೀಸ್ ಹದ್ದಿನ ಕಣ್ಣು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ 53 ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ: ಎಸ್ಪಿ
Last Updated 24 ಜನವರಿ 2017, 5:17 IST
ಅಕ್ಷರ ಗಾತ್ರ

ಉಡುಪಿ: ವಾಹನಗಳ ಮೇಲೆ ನಿಗಾ ಇಡುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ 66ರ ಒಟ್ಟು 53 ಕಡೆ ಸಿ.ಸಿ. ಟಿ.ವಿ. ಕ್ಯಾಮೆರಾ ಅಳವಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಟಿ. ಬಾಲಕೃಷ್ಣ ಹೇಳಿದರು.

ಸೋಮವಾರ ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಜಾರಿ ಮಾಡುತ್ತಿರುವ ಯೋಜನೆಯಲ್ಲಿ ಗೋವಾದಿಂದ ಕೇರಳದ ವರೆಗೆ ಹೆದ್ದಾರಿಯಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಯಾವ ಭಾಗದಲ್ಲಿ ಇದನ್ನು ಅಳವಡಿಸಬಹು ದಾದ ಸ್ಥಳಗಳನ್ನು ಗುರುತಿಸಲಾಗಿದೆ.

ಅತ್ಯಧಿಕ ಸಾಮರ್ಥ್ಯದ ಕ್ಯಾಮೆರಾಗಳನ್ನು ಇಲ್ಲಿ ಅಳವಡಿಸುವುದರಿಂದ ಅತಿ ವೇಗವಾಗಿ ಸಂಚರಿಸುವ ವಾಹನಗಳ ವಿವರಗಳು ಕ್ಯಾಮೆರಾದಲ್ಲಿ ದಾಖಲಾಗುತ್ತವೆ. ಅಲ್ಲದೆ, ಅಪಘಾತ ಮಾಡಿ ತಪ್ಪಿಸಿ ಕೊಳ್ಳಲು ಯತ್ನಿಸುವವರು ಕಂಡುಹಿಡಿ ಯಬಹುದು. ವಾಹನವೊಂದರಲ್ಲಿ ಯಾರು ವಾಹನ ಚಾಲನೆ ಮಾಡುತ್ತಿ ದ್ದರು, ವಾಹನದಲ್ಲಿ ಯಾರ್‍ಯಾರು ಇದ್ದರು ಎಂಬ ಮಾಹಿತಿಯನ್ನೂ ಪಡೆಯಬ ಹುದು. ಆದ್ದರಿಂದ ಅಪಘಾತ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸುವವರನ್ನು ಗುರುತಿಸಿ ಕ್ರಮ ಕೈಗೊಳ್ಳಬಹುದು. ಒಟ್ಟಾರೆ ಹೆದ್ದಾರಿ ಮೇಲೆ ಹದ್ದಿನ ಕಣ್ಣಿಡಲು ಇದರಿಂದ ಸಾಧ್ಯವಾಗುತ್ತದೆ. ಮಾಹಿತಿ ಸಂಗ್ರಹ ಕೇಂದ್ರ ಮತ್ತಿತರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸುತ್ತಿರುವ ಅಪಘಾತಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದ್ದು, ಅವುಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಅಗತ್ಯ ಇರುವ ಕಡೆ ಸೂಚನಾ ಫಲಕ ಅಳವಡಿಸಲಾಗುತ್ತಿದೆ, ಅಲ್ಲದೆ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ಗಳೊಂದಿಗೆ ಸಂಪರ್ಕ ಸಾಧಿಸಿ ಸಲಹೆ– ಸೂಚನೆ ನೀಡಲಾಗುತ್ತಿದೆ. ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗದಿರುವ ಕಾರಣ ಹಾಗೂ ಹೆದ್ದಾರಿ ಜಾಯಮಾನಕ್ಕೆ ಸ್ಥಳೀಯ ಹೊಂದಿಕೊಳ್ಳದ ಕಾರಣ ಗೊಂದಲವಾಗಿ ಅದು ಅಪಘಾತಕ್ಕೆ ಕಾರಣವಾಗುತ್ತಿರುವ ಅಂಶವನ್ನು ಗಮನಿಸಿದ್ದೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT