ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು 52ನೇ ಘಟಿಕೋತ್ಸವದ ಅಂಗವಾಗಿ ತಮಗೆ ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ನಯವಾಗಿ ನಿರಾಕರಿಸಿರುವ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಸಂಶೋಧನೆ ಮಾಡಿಯೇ ಡಾಕ್ಟರೇಟ್ ಪಡೆಯುವುದಾಗಿ ತಿಳಿಸಿದ್ದಾರೆ.

ದಶಕಗಳಿಗೂ ಹೆಚ್ಚುಕಾಲ ಭಾರತೀಯ ಕ್ರಿಕೆಟ್ ತಂಡದಲ್ಲಿ ಆಡಿದ್ದ ರಾಹುಲ್ ಭಾರತ ಕ್ರಿಕೆಟ್ ತಂಡದ ನಾಯಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರ ಸಾಧನೆಯನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾಲಯ ಜನವರಿ 27ರಂದು ನಡೆಯುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ದ್ರಾವಿಡ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿತ್ತು.

[related]

ದ್ರಾವಿಡ್ ಬೆಂಗಳೂರು ವಿವಿಯ ಗೌರವ ಡಾಕ್ಟರೇಟ್ ಪಡೆಯಲಿರುವ ಬೆಂಗಳೂರು ಮೂಲದ ಎರಡನೇ ಕ್ರಿಕೆಟಿಗ ಎನಿಸಿದ್ದರು. ಈ ಮೊದಲು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಗುಂಡಪ್ಪ ವಿಶ್ವನಾಥ್ ಅವರು 2013ರಲ್ಲಿ ವಿವಿಯ ಗೌರವ ಡಾಕ್ಟರೇಟ್ ಸ್ವೀಕರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.