ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈವಿಧ್ಯತೆಯಲ್ಲಿ ಏಕತೆ ಸಾಧಿಸಿದ ದೇಶ– ಶಾಸಕ

ಸೋಮವಾರಪೇಟೆಯಲ್ಲಿ ಗಣರಾಜ್ಯೋತ್ಸವ
Last Updated 27 ಜನವರಿ 2017, 9:30 IST
ಅಕ್ಷರ ಗಾತ್ರ

ಸೋಮವಾರಪೇಟೆ: ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ಭಾರತದಲ್ಲಿ ವಿವಿಧ ಧರ್ಮ, ವಿವಿಧ ಭಾಷೆಗಳನ್ನು ಮಾತನಾಡುವ ಜನರಿದ್ದರೂ ವೈವಿಧ್ಯತೆಯಲ್ಲಿ ಏಕತೆಯನ್ನು  ಹೊಂದಿದೆ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ 68ನೇ ಗಣರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್ ಮಾತನಾಡಿದರು. ತಹಶೀಲ್ದಾರ್ ಕೃಷ್ಣ ಧ್ವಜಾರೋಹಣ ನೆರವೇರಿಸಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ರಾಜೇಶ್, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್.ವಿಜಯಲಕ್ಷ್ಮಿ ಸುರೇಶ್‌, ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಗೋಪಾಲ್, ತಾಲ್ಲೂಕು ಪಂಚಾಯಿತಿ ಸದಸ್ಯೆ ತಂಗಮ್ಮ ಉಪಸ್ಥಿತರಿದ್ದರು.

ನಿವೃತ್ತ ಸೈನಿಕ ಎಸ್.ಕೆ.ನಾಗರಾಜು ಅವರನ್ನು ಸನ್ಮಾನಿಸಲಾಯಿತು. ಕೃಷಿ ಇಲಾಖೆ ವತಿಯಿಂದ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಉತ್ತಮ ಕೃಷಿಕ ಪ್ರಶಸ್ತಿಯನ್ನು ಪಡೆದ ರೈತರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಧ್ವಜಾರೋಹಣಕ್ಕೂ ಮುನ್ನ ಪೊಲೀಸ್ ಇಲಾಖೆ, ಜೈ ಜವಾನ್ ಮಾಜಿ ಸೈನಿಕರ ಸಂಘ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್.ಸಿ.ಸಿ. ವಿದ್ಯಾರ್ಥಿಗಳಿಂದ  ಪಥಸಂಚಲನ ನಡೆಯಿತು.

ಭ್ರಷ್ಟಾಚಾರ ನಿರ್ಮೂಲನೆಗೆ ಸಹಕರಿಸಿ: ದೇಶದಲ್ಲಿ ಬೇರೂರಿರುವ ಭಯೋತ್ಪಾದನೆ ಮತ್ತು ಭ್ರಷ್ಟಾಚಾರವನ್ನು ಬುಡ ಸಹಿತ ಕಿತ್ತುಹಾಕಲು ಯುವ ಜನಾಂಗ ಮುಂದೆ ಬರಬೇಕೆಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು.

ಇಲ್ಲಿಗೆ ಸಮೀಪದ ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ವತಿಯಿಂದ ಗುರುವಾರ ನಡೆದ ಗಣರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಪೂರ್ಣಿಮಾ ಗೋಪಾಲ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಸಬಿತಾ ಚನ್ನಕೇಶವ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸದಸ್ಯರಾದ ಡಿ.ಎಸ್.ಪೊನ್ನಪ್ಪ, ಪ್ರೌಢಶಾಲೆ ಪ್ರಭಾರ ಮುಖ್ಯ ಶಿಕ್ಷಕ ಯಂಶವಂತ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT