ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧೆಡೆ ಗಣರಾಜ್ಯೋತ್ಸವ ಆಚರಣೆ

Last Updated 27 ಜನವರಿ 2017, 9:44 IST
ಅಕ್ಷರ ಗಾತ್ರ

ಮಂಡ್ಯ: ಜಿಲ್ಲೆಯಲ್ಲಿ 68ನೇ ಗಣ ರಾಜ್ಯೋತ್ಸವವನ್ನು ಗುರುವಾರ ವಿವಿಧ ಶಾಲಾ ಕಾಲೇಜುಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಮಾಂಡವ್ಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಗಣರಾಜ್ಯೋತ್ಸವ ದಲ್ಲಿ ಎಸ್‌.ಬಿ. ಎಜುಕೇಷನ್‌ ಟ್ರಸ್ಟ್‌ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಅವರು ಧ್ವಜಾರೋಹಣ ಮಾಡಿದರು. ಉಪನ್ಯಾಸಕ ಎಚ್‌.ಎನ್‌. ರಮೇಶ್‌ ಮಾತನಾಡಿದರು. ಮುಖ್ಯ ಶಿಕ್ಷಕ ಪಿ. ರಾಮಮೂರ್ತಿ ಉಪಸ್ಥಿತರಿದ್ದರು.

ಗುತ್ತಲು ಬಡಾವಣೆಯಲ್ಲಿ ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.  ಡಾ. ಶಂಕರೇಗೌಡ, ಬಿಜೆಪಿ ಮುಖಂಡ ಅರವಿಂದ್‌, ಎಸ್‌.ಎಂ. ಜವರೇಗೌಡ ಇದ್ದರು.

ನಗರದ ಮೆಟ್ರಿಕ್‌ ಪೂರ್ವ ಸರ್ಕಾರಿ ಬಾಲಕರ ನಿಲಯದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಪ್ರಾಂಶುಪಾಲ ಕೆ. ಚನ್ನಕೃಷ್ಣಯ್ಯ, ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಬಿ.ಎಂ. ಅಪ್ಪಾಜಪ್ಪ, ವಕೀಲ ಎಂ. ಗುರುಪ್ರಸಾದ್‌ ಇದ್ದರು. ಗಾಯಕರು ವಿವಿಧ ಜಾಗೃತಿ ಗೀತೆಗಳನ್ನು ಹಾಡಿ ರಂಜಿಸಿದರು.

ತಾಲ್ಲೂಕಿನ ಬಸರಾಳು ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋ ತ್ಸವದ ಧ್ವಜಾರೋಹಣವನ್ನು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿ. ತಿಮ್ಮೇಗೌಡ ನೆರವೇರಿಸಿದರು. ಗ್ರಾ.ಪಂ. ಸದಸ್ಯ ರಾಜು, ಶ್ರೀನಿವಾಸ್‌, ಕಾಲೇಜಿನ ಪ್ರಾಂಶುಪಾಲ ಚಂದ್ರೇಗೌಡ, ಉಪ ಪ್ರಾಂಶುಪಾಲ ಡಿ. ಕೃಷ್ಣಪ್ಪ ಇದ್ದರು, ನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ತಾಲ್ಲೂಕಿನ ಶಿವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ತಾ.ಪಂ. ಸದಸ್ಯೆ ರೇಖಾ ಸುರೇಶ್‌ ಹಾಗೂ ಗ್ರಾ.ಪಂ. ಸಧ್ಯಕ್ಷೆ ನಂದಿನಿ ಅವರು ರಾಷ್ಟ್ರನಾಯಕರ ಭಾವ ಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ, ಧ್ವಜಾರೋಹಣ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT