ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವೈವಿಧ್ಯತೆಯಲ್ಲಿ ಏಕತೆ ಕಾಣುವ ರಾಷ್ಟ್ರ’

Last Updated 27 ಜನವರಿ 2017, 10:11 IST
ಅಕ್ಷರ ಗಾತ್ರ

ಕನಕಪುರ: ‘ಇಡೀ ವಿಶ್ವದಲ್ಲೇ ವೈವಿಧ್ಯತೆಯಲ್ಲಿ ಏಕತೆ ಕಾಣುವ ರಾಷ್ಟ್ರವೆಂದರೆ ಭಾರತ ಮಾತ್ರ ’ ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ ತಿಳಿಸಿದರು.

ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಏರ್ಪಡಿಸಿದ್ದ  ಗಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನಕಪುರ ತಾಲ್ಲೂಕು ರಾಜ್ಯದಲ್ಲೇ ಅತ್ಯಂತ ಹಿಂದುಳಿದ ತಾಲ್ಲೂಕು ಎಂದು ಹಣೆಪಟ್ಟಿಯನ್ನು ಹೊಂದಿತ್ತು, ಈಗ  ಕನಕಪುರ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ ಎಂದರು.

ಧ್ವಜ ವಂದನೆ ಸ್ವೀಕರಿಸಿದ ತಹಶೀಲ್ದಾರ್‌ ಆರ್‌.ಯೋಗಾನಂದ ಮಾತನಾಡಿ, 120 ಕೋಟಿ ಜನಸಂಖ್ಯೆ ಹೊಂದಿರುವ ಸಾವಿರಾರು ಭಾಷೆ ಮಾತನಾಡುವ ವಿವಿಧ ಧರ್ಮಗಳಿಗೆ ಸೇರಿದ ವಿವಿಧ ದೇವರು ಪೂಜಿಸುವ ಭಾರತ ದೇಶದಲ್ಲಿ ಜನ ನೆಮ್ಮದಿಯಾಗಿ ಸಮಾನತೆಯಿಂದ ಇದ್ದೇವೆ ಎಂದರು.

ವಿವಿಧ ಶಾಲೆಗಳ ವಿದ್ಯಾರ್ಥಿಗಳ ತಂಡ ವಿವಿಧ ಸಾಂಸ್ಕೃತಿಕ ಸಮೂಹ ನೃತ್ಯ ಕಾರ್ಯಕ್ರಮ ನಡೆಸಿಕೊಟ್ಟು ನೆರೆದಿದ್ದ ಜನರನ್ನು ರಂಜಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT