ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಜಾಪ್ರಭುತ್ವದ ಆಶಯ ಉಳಿಯಲು ಪ್ರಜ್ಞಾವಂತ ಮತದಾರ ಅಗತ್ಯ’

Last Updated 27 ಜನವರಿ 2017, 10:13 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ದೇಶದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬಲ್ಲ ಆರಂಭಿಕ ಹಂತವೇ ಚುನಾವಣಾ ಪ್ರಕ್ರಿಯೆಯಾಗಿದೆ. ಪ್ರಜಾಪ್ರಭುತ್ವದಲ್ಲಿ ಮತದಾರರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಸಲುವಾಗಿ ರಾಷ್ಟ್ರೀಯ ಮತದಾರರ ದಿನವನ್ನು  ಆಚರಿಸಲಾಗುತ್ತಿದ್ದು, ಪ್ರಜ್ಞಾವಂತ ಮತದಾರರಿಂದ ಪ್ರಜಾಪ್ರಭುತ್ವದ ಆಶಯಗಳು ಈಡೇರುತ್ತವೆ ಎಂದು ಉಪವಿಭಾಗಾಧಿಕಾರಿ ಎಂ.ಕೆ.ಜಗದೀಶ್ ಹೇಳಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ನಮ್ಮ ಅಮೂಲ್ಯ ಮತ ಈ ದೇಶದ ಭವಿಷ್ಯವನ್ನು ರೂಪಿಸುತ್ತದೆ. ಆದ್ದರಿಂದ ಮತದಾರರು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಬೇಕಿದೆ. ಇದೇ ಜನವರಿ  1ರಂದು 18 ವರ್ಷ ತುಂಬಿದ ಎಲ್ಲರೂ ಮತದಾರರಾಗಿ ನೋಂದಾಯಿಸಿಕೊಳ್ಳಬೇಕಿದೆ. ಭಾರತ ಚುನಾವಣಾ ಆಯೋಗದ ಶಿಫಾರಸ್ಸಿನಂತೆ  ರಾಷ್ಟ್ರೀಯ ಮತದಾರರ ದಿನಾಚರಣೆ ನಡೆಯುತ್ತಿದೆ. ನಮ್ಮ ದೇಶದ ಮತದಾರರಲ್ಲಿ ಯುವಜನಾಂಗದ ಸಂಖ್ಯೆ ಹೆಚ್ಚುತ್ತಿದೆ. ಯುವ ಸಮುದಾಯ ದೇಶದ ಆಸ್ತಿಯಾಗಿರುವುದರಿಂದ ಇಂತಹ ಯುವಕರಲ್ಲಿ ಮತದಾನದ ಮಹತ್ವವನ್ನು ಮೂಡಿಸಬೇಕಾಗಿದೆ’ ಎಂದರು.

ಕೊಂಗಾಡಿಯಪ್ಪ ಕಾಲೇಜಿನ ಪ್ರಾಂಶುಪಾಲ ಡಿ.ಎನ್.ಬಾಬು ಮಾತನಾಡಿ, ದೇಶದ ಮತದಾರರಲ್ಲಿ ಪ್ರಜಾಪ್ರಭುತ್ವ ಮತ್ತು ಮತದಾನದ ಬಗ್ಗೆ ಪ್ರಬುದ್ಧತೆಯನ್ನು ಮೂಡಿಸಿದರೆ ಅದು ದೇಶದ ಅಭಿವೃದ್ಧಿಗೆ  ಸಹಕಾರಿಯಾಗುತ್ತದೆ. ಮುಕ್ತ ಮತದಾನ, ಸ್ವಚ್ಫಂದ ಪ್ರಜಾಪ್ರಭುತ್ವಕ್ಕೆ ವರದಾನವಾಗುತ್ತದೆ.  ಕಡಿಮೆ ಮತದಾನವಾಗುತ್ತಿರುವ ಸಂದರ್ಭದಲ್ಲಿ ಅರಿವಿನಿಂದ ಮತದಾನ ಮಾಡುವ ಸಂಖ್ಯೆ ಹೆಚ್ಚಾಗಲಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ನಂಬಿಕೆ ಮತ್ತು ಅದರ ಆಶಯಗಳು ಉತ್ತಮ ಜನಪ್ರತಿನಿಧಿಗಳಿಂದ ಈಡೇರಬೇಕಾಗಿರುವುದು ರಾಷ್ಟ್ರೀಯ ಮತದಾರರ ದಿನಾಚರಣೆಯ ಮಹತ್ವದ ಉದ್ದೇಶವಾಗಿದೆ. ಮತದಾನ ಪವಿತ್ರವಾದ ಹಕ್ಕು ಎಂಬುದನ್ನು ಎಲ್ಲರೂ ಅರಿಯಬೇಕಾಗಿದೆ ಎಂದರು.

ಮತದಾರರ ಜಾಗೃತಿಗಾಗಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ನೂತನವಾಗಿ ನೋಂದಾಯಿಸಿದ ಮತದಾರರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಶಿರಸ್ತೇದಾರ್ ರಾಮಲಿಂಗಯ್ಯ, ತಾಲ್ಲೂಕು ಪಂಚಾಯಿತಿ ಅಧಿಕಾರಿ ಜೈಪಾಲ್, ಚುನಾವಣಾ ಶಾಖೆಯ ಅಧಿಕಾರಿ ರವಿ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT