ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಆಂತರಿಕ ಭದ್ರತೆಗೆ ಸರ್ವರು ದುಡಿಯಬೇಕು

ಕಣ್ಮನ ಸೆಳೆದ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ, ಆಕರ್ಷಕ ಪಥಸಂಚಲನ
Last Updated 27 ಜನವರಿ 2017, 10:16 IST
ಅಕ್ಷರ ಗಾತ್ರ

ದೇವನಹಳ್ಳಿ : ಅಖಂಡ ಭಾರತದ ಪರಿಕಲ್ಪನೆಯಿಂದ ಭಾಷಾವಾರು ಪ್ರಾಂತೀಯ ರಾಜ್ಯಗಳನ್ನು ಒಂದು ಒಕ್ಕೂಟ ವ್ಯವಸ್ಥೆಗೆ ತಂದ ದಿನವನ್ನೇ ಭಾರತ ಗಣರಾಜ್ಯೋತ್ವವ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ತಿಳಿಸಿದರು .

ದೇವನಹಳ್ಳಿ ಸರ್ಕಾರಿ ಕಿರಿಯ  ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 68 ನೇ ಗಣರಾಜ್ಯೋತ್ಸವದಲ್ಲಿ ಮಾತನಾಡಿದ ಅವರು,  ದೇಶದ ಸುಭದ್ರ ಅಡಳಿತ ವ್ಯವಸ್ಥೆಯಲ್ಲಿ ಅನುಸರಿಸ ಬೇಕಾದ ಅಡಳಿತ ನಿರ್ವಹಣೆ, ಕಾನೂನು ಪಾಲನೆ, ನಿಯಮ, ಹಕ್ಕು ಮತ್ತು ಕರ್ತವ್ಯ ನೀಡಬೇಕಾದ ಮೂಲ ಸೌಲಭ್ಯಗಳ ಬಗ್ಗೆ ಅರಿತುಕೊಳ್ಳಬೇಕಾಗಿದೆ ಎಂದರು.

ಜಿ.ಪಂ ಉಪಾಧ್ಯಕ್ಷೆ ಅನಂತಕುಮಾರಿ ಮಾತನಾಡಿ, ಸಮಾನತೆಯ ಜೀವನಕ್ಕೆ ಉಸಿರು ನೀಡಿದ ಡಾ.ಬಿ.ಆರ್ ಅಂಬೇಡ್ಕರ್ ವಿಶ್ವಮಾನ್ಯ ಬುದ್ಧಿವಂತರು.  ನಮ್ಮ ರಾಷ್ಟ್ರ, ನಮ್ಮ ನೆಲ ಎಂಬ ಅರಿವು ಬೆಳೆಸಿಕೊಳ್ಳಬೇಕು. ದೇಶದ ಪ್ರಗತಿಗೆ ಶಿಕ್ಷಣ ಅತಿಮುಖ್ಯ ಎಂದರು .

ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ದೇಶದ ಸಾರ್ವಭೌಮತ್ವದ ರಕ್ಷಣೆಗೆ ಯುವ ಸಮುದಾಯ ಟೊಂಕ ಕಟ್ಟಬೇಕಾಗಿದೆ ಎಂದರು.
ಜಿ.ಪಂ ಸದಸ್ಯ ಲಕ್ಷ್ಮಿನಾರಾಯಣ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಪಿಳ್ಳಮುನಿಶಾಮಪ್ಪ, ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಬಡತನ ನಿರುದ್ಯೋಗ ಶಾಪವಾಗಿ ಕಾಡುತ್ತಿವೆ ಎಂದರು.

ತಾ.ಪಂ ಅಧ್ಯಕ್ಷೆ ಭಾರತಿಲಕ್ಷ್ಮಣ್‌ಗೌಡ ತಾ.ಪಂ ಉಪಾಧ್ಯಕ್ಷೆ ನಂದಿನಿ, ಜಿ.ಪಂ ಸದಸ್ಯ ಕೆ.ಸಿ ಮಂಜುನಾಥ್, ರಾಧಮ್ಮ ಮುನಿರಾಜು, ಪುರಸಭೆ ಅಧ್ಯಕ್ಷ ನರಸಿಂಹಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷ ಬೇಕರಿ ಮಂಜುನಾಥ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಆರ್. ರವಿಕುಮಾರ್, ಟಿ.ಪಿ.ಎಂ.ಸಿ.ಎಸ್ ಅಧ್ಯಕ್ಷ ಚಿಕ್ಕನಾರಾಯಣಸ್ವಾಮಿ ಡಿಸಿಸಿ ಬ್ಯಾಂಕ್ ನಿರ್ದೆಶಕ ಸೊಣ್ಣಪ್ಪ, ಪುರಸಭೆ ಮುಖ್ಯಾಧಿಕಾರಿ ಅಂಬಿಕಾ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಮೂರ್ತಿ,  ಕ್ಷೇತ್ರ ಶಿಕ್ಷಣಾಧಿಕಾರಿ ಮುನಿರಾಜು ಹಾಗೂ ತಾ.ಪಂ ಸದಸ್ಯರು ಮತ್ತು ಪುರಸಭೆ ಸದಸ್ಯರು ಉಪಸ್ಥಿತರಿದ್ದರು .

ಬೆಳಿಗ್ಗೆ 8 ಗಂಟೆಯಲ್ಲಿ ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯದಿಂದ ಪ್ರಭಾತ್ ಪೇರಿ ಮತ್ತು ಪಥಸಂಚಲನ ತಂಡದೊಂದಿಗೆ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ಭಾವಚಿತ್ರ ಹೊತ್ತ ವಾಹನ ಮೆರವಣಿಗೆಯಲ್ಲಿ ಮೈದಾನಕ್ಕೆ ಬಂದ ನಂತರ ಧ್ವಜಾರೋಹಣ ನಡೆಸಿ ವಿದ್ಯಾರ್ಥಿಗಳಿಂದ ಧ್ವಜವಂದನೆ ನಡೆಸಲಾಯಿತು. ವಿವಿಧ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT