ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶ್ರಯ ಮನೆ ನೀಡಲು ಒತ್ತಾಯ

Last Updated 28 ಜನವರಿ 2017, 7:18 IST
ಅಕ್ಷರ ಗಾತ್ರ

ಔರಾದ್: ತಾಲ್ಲೂಕಿನ ನಾರಾಯಣಪುರ ಗ್ರಾಮದ ಬಡ ಮಹಿಳೆಯೊಬ್ಬರಿಗೆ ಆಶ್ರಯ ಮನೆ ನೀಡದೇ ವಂಚನೆ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಲಾಗಿದೆ.

ಬಾದಲಗಾಂವ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರಾಯಣಪುರ ಗ್ರಾಮದ ವಿಧವೆ ವಿಮಲಾಬಾಯಿ ಶಂಕರೆಪ್ಪ ಅವರು ‘ಗ್ರಾಮ ಪಂಚಾಯಿತಿ ವತಿಯಿಂದ ಬಸವ ಯೋಜನೆ ಅಡಿ ಮನೆ ನೀಡದೆ, ವಂಚಿಸಲಾಗಿದೆ’ ಎಂದು ಮೇಲಧಿಕಾರಿಗಳಿಗೆ ದೂರು ನೀಡಿದ್ದಾರೆ.

‘ಕಳೆದ ತಿಂಗಳು ನಡೆದ ಗ್ರಾಮ ಸಭೆಯಲ್ಲಿ ನನಗೆ ಬಸವ ವಸತಿ ಯೋಜನೆಯಡಿ ಫಲಾನುಭವಿಯಾಗಿ ಆಯ್ಕೆ ಮಾಡಲಾಗಿತ್ತು. ಆದರೆ ನಂತರ ಮತ್ತೊಮ್ಮೆ  ಸಭೆ ನಡೆಸಿ ಫಲಾನುಭವಿಗಳ ಪಟ್ಟಿಯಿಂದ ನನ್ನನ್ನು ಕೈಬಿಟ್ಟು ಉಳ್ಳವರಿಗೆ ಮನೆ ಹಂಚಿಕೆ ಮಾಡಿದ್ದಾರೆ’ ಎಂದು ದೂರಿದ್ದಾರೆ.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ತಮಗೆ ನಿವೇಶನ ಮಂಜೂರು ಮಾಡಿಸಬೇಕು. ಇಲ್ಲವಾದಲ್ಲಿ ಕುಟುಂಬ ಸಮೇತ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT