ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕಕಾಲಕ್ಕೆ ಚುನಾವಣೆಗೆ ಸಹಮತ

ಎಪಿಎಂಸಿಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಕಾರ್ಯಕಾರಣಿ ಸಭೆ
Last Updated 28 ಜನವರಿ 2017, 7:23 IST
ಅಕ್ಷರ ಗಾತ್ರ

ರಾಯಚೂರು: ಲೋಕಸಭೆ ಹಾಗೂ ವಿಧಾನಸಭೆಗಳ ಚುನಾವಣೆಯನ್ನು ಏಕಕಾಲದಲ್ಲಿ ನಡೆಸಲು ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ನೀಡಿರುವ ಹೇಳಿಕೆಗೆ ಬಿಜೆಪಿ ಸಹಮತ ಇದೆ.

ಒಟ್ಟಿಗೆ ಚುನಾ­ವಣೆ ನಡೆಸುವುದರಿಂದ ಚುನಾವಣಾ ವೆಚ್ಚ ಕಡಿಮೆಯಾಗಿ, ದೇಶದ ಅಭಿವೃದ್ಧಿಗೆ ಅನುಕೂಲ ಆಗಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್ ಹೇಳಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಹೆಚ್ಚಿನ ಕಾಲ ಆಡಳಿತ ನಡೆಸಿದ ಪಕ್ಷ ಸಂವಿಧಾನದ ಆಶಯದಂತೆ ಆಡಳಿತ ನಡೆಸಿಲ್ಲ ಎಂದು ಟೀಕಿಸಿದ ಅವರು, ಡಾ.ಅಂಬೇಡ್ಕರರ ಆಶಯ ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ ಎಂದರು.

ದೊಡ್ಡ ಮುಖ ಬೆಲೆ ನೋಟು ರದ್ದುಪಡಿಸಿ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಗೆ ಕಡಿವಾಣ ಹಾಕಿರುವ ಪ್ರಧಾನಿ ಮೂಲಕ ಯಾರೂ ಊಹಿಸದ ತೀರ್ಮಾನ ಕೈಗೊಳ್ಳುವ ಮೂಲಕ ಜನರ ಮೆಚ್ಚುಗೆ ಗಳಿಸಿದ್ದಾರೆ. ಈ ಕ್ರಮದಿಂದ ತೆರಿಗೆ ಸಂಗ್ರಹ ಹೆಚ್ಚಳವಾಗಿದೆ. ಇನ್ನು ಮುಂದೆ ಅಬಕಾರಿ ತೆರಿಗೆಯ ಮೇಲೆ ಅವಲಂಬನೆ ತಗ್ಗಿಸಿ ನಗದು ರಹಿತ ವ್ಯವಹಾರದ ತೆರಿಗೆ ಆಧಾರದಲ್ಲಿ ಬಜೆಟ್‌ ಮಂಡನೆ ಆಗಲಿದೆ ಎಂದರು.

ರಾಜ್ಯ ಕಾರ್ಯದರ್ಶಿ ಎನ್‌.ಶಂಕರಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಜಿಲ್ಲಾ ಘಟಕದ ಅಧ್ಯಕ್ಷ ಜೆ.ಶರಣಪ್ಪಗೌಡ, ಎ.ಪಾಪಾರೆಡ್ಡಿ, ಗಂಗಾಧರ ನಾಯಕ, ಆರ್.ತಿಮ್ಮಯ್ಯ ಇದ್ದರು.

ಕೆ.ಶಿವನಗೌಡ, ತಿಪ್ಪರಾಜು ಸೇರಿ ಬಹುತೇಕರು ಗೈರು: ಬಿಜೆಪಿ ಜಿಲ್ಲಾ ಘಟಕ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕಾರಣಿ ಸಭೆಗೆ ಜಿಲ್ಲೆಯ ಇಬ್ಬರು ಶಾಸಕರದ ಕೆ.ಶಿವನಗೌಡ ಮತ್ತು ತಿಪ್ಪರಾಜು ಹವಾಲ್ದಾರ್‌ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಬಹುತೇಕ ಜನಪ್ರತಿ­ನಿಧಿ­ಗಳು ಹಾಗೂ ಪದಾಧಿಕಾರಿಗಳು ಗೈರು ಹಾಜರಾಗಿದ್ದರು.

ರಾಜ್ಯ ಘಟಕದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯ ಜಿಲ್ಲಾ ಘಟಕದಲ್ಲೂ ಕಾಣಿಸಿಕೊಂಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿ­ಯೂರಪ್ಪ ಅವರ ವಿರೋಧಿ ಗುಂಪಿನವರು ಎಂದು ಹೇಳಲಾದವರು ಗೈರು ಹಾಜರಾಗಿದ್ದರು.

ಸಚಿವ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯ: ಆದಾಯ ತೆರಿಗೆ ಇಲಾಖೆಯ ನಡೆಸಿದ ದಾಳಿಯಲ್ಲಿ ಸಚಿವ ರಮೇಶ ಜಾರಕಿಹೊಳಿ ಮತ್ತು ಕಾಂಗ್ರೆಸ್‌ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ ಅವರ ಬಳಿ ₹ 162 ಕೋಟಿ ಆಸ್ತಿ ಪತ್ತೆ ಆಗಿದೆ. ಆದ್ದರಿಂದ, ಮುಖ್ಯಮಂತ್ರಿ ಅವರು ಅವರಿಬ್ಬರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ  ಎನ್‌.ರವಿಕುಮಾರ್‌ ಒತ್ತಾಯಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬರ ನಿರ್ವಹಣೆ ಹಾಗೂ ರೈತರ ಸಾಲ ಮನ್ನಾ ಮಾಡದ ರಾಜ್ಯ ಸರ್ಕಾರ ಎಲ್ಲದ್ದಕ್ಕೂ ಕೇಂದ್ರ ಸರ್ಕಾರದ ಕಡೆ ಕೈ ತೋರಿಸುತ್ತಿದೆ. ರಾಜ್ಯದ ಸರ್ಕಾರ ಕೈಗೊಂಡಿರುವ ಅಭಿವೃದ್ಧಿಯ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದರು.

ರಾಜ್ಯದಲ್ಲಿ ಭ್ರಷ್ಟಾಚಾರ, ಅತ್ಯಾಚಾರ ಹಗರಣಗಳು ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಬರ ನಿರ್ವಹಣೆಯಲ್ಲೂ ಸರ್ಕಾರ ಎಡವಿದೆ ಎಂದು ಟೀಕಿಸಿದರು. ಬಿ.ಎಸ್‌.ಯಡಿಯೂರಪ್ಪ ಹಾಗೂ ಕೆ.ಎಸ್‌.ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯವನ್ನು ಕೇಂದ್ರ ನಾಯಕರು ಬಗೆ ಹರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT