ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚನ್ನಮ್ಮ, ರಾಯಣ್ಣ ಜಾತಿಗೆ ಸೀಮಿತವಲ್ಲ’

Last Updated 28 ಜನವರಿ 2017, 8:23 IST
ಅಕ್ಷರ ಗಾತ್ರ

ಕುಷ್ಟಗಿ: ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರಾಣಿ ಕಿತ್ತೂರ ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರನ್ನು ಜಾತಿಗೆ ಸೀಮಿತಗೊಳಿಸುವಂಥ ಸಂಕುಚಿತ ಮನಸ್ಸು ಸರಿಯಲ್ಲ ಎಂದು ಬರಹಗಾರ ಬಸವರಾಜ ಉಪ್ಪಲದಿನ್ನಿ ಹೇಳಿದರು.

ತಾಲ್ಲೂಕಿನ ಶಾಖಾಪುರ ಗ್ರಾಮದಲ್ಲಿ ಗುರುವಾರ ಸಮರ್ಥ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆಯಿಂದ ತಾಲ್ಲೂಕಿನ ಶಾಖಾಪುರ ಗ್ರಾಮದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜೀವನ ಚರಿತ್ರೆ ಮತ್ತು ಕಿತ್ತೂರು ರಾಣಿ ಚನ್ನಮ್ಮನ ಹೋರಾಟದ ಸ್ಮರಣೆಗಾಗಿ ಹಮ್ಮಿಕೊಳ್ಳಲಾಗಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಗೊಳ್ಳಿ ರಾಯಣ್ಣ ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅವರನ್ನು ಒಂದು ಜಾತಿಗೆ ಸೀಮಿತಗೊಳಿಸುತ್ತಿರುವುದರಿಂದ ಸಮಾಜದಲ್ಲಿ ತಪ್ಪುಕಲ್ಪನೆ ಮೂಡುತ್ತಿದೆ ಎಂದರು.

ಹಾಲುಮತ ಸಮಾಜದ ಜಿಲ್ಲಾ ಉಪಾಧ್ಯಕ್ಷ ಪರಸಪ್ಪ ಪಂಚಮ ಕಾರ್ಯಕ್ರಮ ಉದ್ಘಾಟಿಸಿದರು. ಅಮರೇಶ ಹಿರೇಗೌಡ್ರ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಜೆಡಿಎಸ್‌ ಘಟಕದ ಅಧ್ಯಕ್ಷ ಸಿ.ಎಂ.ಹಿರೇಮಠ, ತಾಲ್ಲೂಕು ಪಂಚಮಸಾಲಿ ಲಿಂಗಾಯತ ಸಮಾಜದ ಅಧ್ಯಕ್ಷ ಚಂದ್ರಶೇಖರ ನಾಲತವಾಡ, ಸಂಕಲ್ಪ ಸಂಸ್ಥೆ ಅಧ್ಯಕ್ಷ ಹನಮೇಶ ಕುಲಕರ್ಣಿ, ಶಾರಾದಾ ಕಟ್ಟಿಮನಿ, ಸುಶೀಲಾ ಕಟ್ಟಿಮನಿ, ಅನೀಲ್ ಕಮ್ಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT