ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೌಲ್ಯಯುತ ಜೀವನ ನಡೆಸಲು ಸಲಹೆ

Last Updated 28 ಜನವರಿ 2017, 8:33 IST
ಅಕ್ಷರ ಗಾತ್ರ

ಬಸವನಬಾಗೇವಾಡಿ:  ಭ್ರಷ್ಟಾಚಾರ, ಭಯೋತ್ಪಾದನೆ ಎಂಬ ಎರಡು ಭೂತಗಳು ದೇಶವನ್ನು ಕಾಡುತ್ತಿವೆ. ಇವುಗಳನ್ನು ಹೊಡೆದೋಡಿಸಲು ಯುವಕರು ಪಣತೊಡಬೇಕು ಎಂದು ಡಾ.ಬಸನಗೌಡ ಪಾಟೀಲ (ನಾಗರಾಳಹುಲಿ) ಹೇಳಿದರು.

ಪಟ್ಟಣದ ಬಸವೇಶ್ವರ ದೇವಸ್ಥಾನದ ಹೊರ ಆವರಣದಲ್ಲಿ 68ನೇ ಗಣ ರಾಜ್ಯೋತ್ಸವದ ಅಂಗವಾಗಿ ಗುರುವಾರ ಸಂಜೆ ರಾಷ್ಟ್ರೀಯ ಬಸವಸೈನ್ಯ ಹಮ್ಮಿಕೊಂಡಿದ್ದ ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಯುವಕರು ದುಶ್ಚಟಗಳಿಗೆ ದಾಸರಾಗದೇ, ಮೌಲ್ಯಯುತ ಜೀವನ ನಡೆಸಲು ಬೇಕಾದ ಗುಣಗಳನ್ನು ಬೆಳೆಸಿಕೊಳ್ಳಬೇಕು. ದೇಶಪ್ರೇಮವನ್ನು ಬೆಳೆಸಿಕೊಳ್ಳುವುದರ ಮೂಲಕ ದೇಶದ ಪ್ರಗತಿಗೆ ಪೂರಕವಾದ ಕೆಲಸದಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.

ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ಬಸವಸೈನ್ಯ ಸಂಘಟನೆಯು ಬಸವಾದಿ ಶರಣರ ತತ್ವ ಸಿದ್ದಾಂತಗಳನ್ನು ಜನರಿಗೆ ಮುಟ್ಟಿಸುವ ಕೆಲಸದ ಜೊತೆಗೆ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವ ಮೂಲಕ ಜನರಲ್ಲಿ ದೇಶಪ್ರೇಮದ ಮಹತ್ವ ತಿಳಿಸುತ್ತಿದೆ. ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸುವ ನಿಟ್ಟಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಬಿಜೆಪಿ ಬ್ಲಾಕ್ ಘಟಕದ ಅಧ್ಯಕ್ಷ ಬಿ.ಕೆ.ಕಲ್ಲೂರ ಕಾರ್ಯಕ್ರಮ ಉದ್ಘಾಟಿಸಿದರು. ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮುಖಂಡರಾದ ಲೋಕನಾಥ ಅಗರವಾಲ, ಸಂಗಮೇಶ ಓಲೇೆಕಾರ, ರುಕ್ಮಿಣಿ ರಾಥೋಡ, ಮನ್ನಾನ ಶಾಬಾದಿ, ಶಿವನಗೌಡ ಬಿರಾದಾರ, ಎಪಿಎಂಸಿ ನಿರ್ದೇಶಕ ಶೇಖರ ಗೊಳಸಂಗಿ, ವಿಶ್ವನಾಥ ಪಾಟೀಲ, ಬಸವರಾಜ ತಳವಾರ, ಸಿ ಸಿ ಪಾಟೀಲ, ಮುತ್ತು ಪತ್ತಾರ, ಬಸವಸೈನ್ಯ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಕಾಂತ ಪಟ್ಟಣಶೆಟ್ಟಿ ಇತರರು ವೇದಿಕೆಯಲ್ಲಿದ್ದರು.

ರಾಜು ಪಟ್ಟಣಶಟ್ಟಿ ಸ್ವಾಗತಿಸಿದರು, ವಕೀಲ ರವಿ ರಾಠೊಡ ನಿರೂಪಿಸಿದರು. ಕುಶಾಲ ಬೆಣ್ಣೊರ ವಂದಿಸಿದರು, ಕಾರ್ಯಕ್ರಮದಲ್ಲಿ ನಾಲ್ಕು ವರ್ಷದ ಬಾಲಕ ಸಮರ್ಥ ಬೆಣ್ಣೂರ ಅವರ ಗಣರಾಜ್ಯೋತ್ಸವ ಕುರಿತು ಇಂಗ್ಲೀಷ್‌ ಭಾಷೆಯಲ್ಲಿ ಭಾಷಣ ಮಾಡಿದ್ದು ಗಮನ ಸೆಳೆಯಿತು. ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT