ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಂವಿಧಾನಿಕ ಹಕ್ಕುಗಳ ಅರಿವು ಅಗತ್ಯ’

Last Updated 28 ಜನವರಿ 2017, 10:56 IST
ಅಕ್ಷರ ಗಾತ್ರ

ವಿಜಯಪುರ: ಸಮಾಜದಲ್ಲಿ ಪ್ರತಿಯೊಬ್ಬರಿಗೆ ಸಾಂವಿಧಾನಿಕವಾಗಿ ಇರುವ ಹಕ್ಕುಗಳನ್ನು ರಾಜಕೀಯ ಲಾಭಕ್ಕಾಗಿ ರಾಜಕಾರಣಿಗಳು ದುರುಪಯೋಗ ಪಡಿಸಿಕೊಳ್ಳುತ್ತಿರುವುದರಿಂದ  ಮಾನವ ಸಂಪನ್ಮೂಲ ಅಭಿವೃದ್ಧಿ ಹೊಂದುವಲ್ಲಿ ವಿಫಲವಾಗುತ್ತಿದೆ ಎಂದು ಮಾನವ ಹಕ್ಕುಗಳ ಪ್ರಚಾರ ವೇದಿಕೆಯ ರಾಜ್ಯ ಕಾರ್ಯಾಧ್ಯಕ್ಷ ಸಿ.ಮುನಿಯಪ್ಪ ಅಸಮಧಾನ ವ್ಯಕ್ತಪಡಿಸಿದರು.

ಪಟ್ಟಣದ ಪ್ರವಾಸಿಮಂದಿರದಲ್ಲಿ ಆಯೋಜಿಸಿದ್ದ ಮಾನವ ಹಕ್ಕುಗಳ ಪ್ರಚಾರ ವೇದಿಕೆ ಪದಾಧಿಕಾರಿಗಳ ಸಭೆಯಲ್ಲಿ ಕಾರ್ಯಾಧ್ಯಕ್ಷರಾಗಿ ಆಯ್ಕೆ ಪತ್ರವನ್ನು ಸ್ವೀಕರಿಸಿ ಮಾತನಾಡಿದರು.

ಪ್ರತಿಯೊಬ್ಬ ನಾಗರಿಕರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ, ಬದಕಲು ಅಗತ್ಯವಾಗಿರುವ ಎಲ್ಲಾ ಸೌಲಭ್ಯಗಳನ್ನು ಪಡೆಯುವಂತಹ ಹಕ್ಕು ಸೇರಿದಂತೆ ಎಲ್ಲಾ ಅವಕಾಶಗಳಿದ್ದರೂ ಅವುಗಳನ್ನು ಸಮಯಕ್ಕೆ ಬಳಕೆ ಮಾಡಿಕೊಳ್ಳಲು ಜಾಗೃತರಾಗದ ಕಾರಣ ಸಮಾಜದಲ್ಲಿ ಇಂದು  ಮಹಿಳೆಯರ, ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇವೆ ಎಂದರು.

ಇಂತಹ ವ್ಯವಸ್ಥೆಯನ್ನು ಹೋಗಲಾಡಿಸಲು  ಪ್ರತಿಯೊಬ್ಬರು ಕಾನೂನು ಚೌಕಟ್ಟಿನಲ್ಲಿ  ಹೋರಾಡುವ ಮೂಲಕ ಸಮಾಜದಲ್ಲಿ ಇತರೆ ಜನರಿಗೆ ಮನವರಿಕೆ ಮಾಡಿಕೊಡಬೇಕಾಗಿದೆ.  ಹೆಚ್ಚಿನ ಪ್ರಮಾಣದಲ್ಲಿ ಯುವಜನರು ಜಾಗೃತರಾಗುವಂತೆ ವೇದಿಕೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ರಾಜ್ಯ ಘಟಕದ ಅಧ್ಯಕ್ಷ ಪಾಲ್ ಮುನಿಕೃಷ್ಣಪ್ಪ ಮಾತನಾಡಿ, ಸಂಘಟನೆ ಶೋಷಿತರ ಪರವಾಗಿ ದ್ವನಿಯೆತ್ತುವ ಕೆಲಸ ಮಾಡುತ್ತದೆ. ಇದಕ್ಕೆ ನಾಗರಿಕರ ಸಹಕಾರ ಮುಖ್ಯವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT