ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬ್ಯಾಂಕಿಂಗ್‌ ಕ್ಷೇತ್ರದ ಸವಾಲು ಮೆಟ್ಟಿ ನಿಲ್ಲಿ’

Last Updated 30 ಜನವರಿ 2017, 7:01 IST
ಅಕ್ಷರ ಗಾತ್ರ

ಚಿಕ್ಕಮಗಳೂರು:  ‘ಬ್ಯಾಂಕಿಂಗ್ ಕ್ಷೇತ್ರದ ಸವಾಲುಗಳನ್ನು ಎದುರಿಸಲು ಸಹಕಾರಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಸಜ್ಜಾಗಬೇಕು’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಧರ್ಮೇಗೌಡ  ತಿಳಿಸಿದ್ದಾರೆ.

ನಗರದಲ್ಲಿ ಜಿಲ್ಲಾ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ರಾಜ್ಯ ಸಹಕಾರ ಮಹಾ ಮಂಡಳ, ಜಿಲ್ಲಾ ಸಹಕಾರ ಯೂನಿ ಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಸಹಕಾರಿ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ಸಹಕಾರ ಇಲಾಖೆ ಸಿಬ್ಬಂದಿಗೆ ಆಯೋಜಿಸಿದ್ದ ‘ಸಹಕಾರ ವಲಯದಲ್ಲಿ ಇತ್ತೀಚಿನ ಬೆಳವಣಿಗೆಗಳು ಗ್ರಾಹಕರ ಸೇವೆಗಳು ಸಹಕಾರ ಕಾಯ್ದೆ ಮತ್ತು ನಿಯಮಗಳ ಮುಖ್ಯಾಂಶಗಳ’ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಬ್ಯಾಂಕಿಂಗ್ ಕ್ಷೇತ್ರ ಬಹಳ ವೇಗದಲ್ಲಿ ಬೆಳೆಯುತ್ತಿದೆ. ಈ ಕ್ಷೇತ್ರದಲ್ಲಿನ ಸವಾಲುಗಳನ್ನು ಸಹಕಾರ ತತ್ವದಡಿ ಕಾರ್ಯ ನಿರ್ವಹಿಸುವ ಸಂಸ್ಥೆಗಳೂ ಸಮರ್ಪಕವಾಗಿ ಎದುರಿಸಬೇಕು. ಇದಕ್ಕೆ ಕಾರ್ಯಕ್ಷಮತೆ ಹೊಂದಿದ ನೌಕರರು ಅತ್ಯಗತ್ಯ. ಅದಕ್ಕೆ ಕಾಲಕಾಲದ ಬದಲಾ ವಣೆಗಳ ಕುರಿತು ಸಿಬ್ಬಂದಿಗಳಲ್ಲಿ ಜ್ಞಾನ ಹೊಂದುವುದು ಮುಖ್ಯ ಎಂದರು.

ರಾಜ್ಯ ಸಹಕಾರ ಮಹಾ ಮಂಡಳದ ನಿರ್ದೇಶಕ ಎಸ್.ಎಲ್.ಬೋಜೇಗೌಡ ಮಾತನಾಡಿ, ಸಹಕಾರಿ ಸಂಸ್ಥೆಗಳನ್ನು ಕಟ್ಟಿ ಬೆಳಸಲು ಹಿಂದಿನವರು ಬಹಳ ತ್ಯಾಗ ಮಾಡಿದ್ದಾರೆ. ಈಗ ಸಹಕಾರಿ ಸಂಸ್ಥೆಗ ಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಆದುದರಿಂದ ಸಹಕಾರಿ ಸಂಸ್ಥೆಗಳ ಉಳಿವಿಗೆ ಸಿಬ್ಬಂದಿಯ  ಪಾತ್ರ ಮುಖ್ಯವಾಗಿದೆ ಎಂದರು.
ಬ್ಯಾಂಕ್ ವ್ಯವಸ್ಥಾಪಕ ನಿದೇರ್ಶಕ ಡಿ.ಬಿ.ಲಿಂಗಣ್ಣಯ್ಯ ಮಾತನಾಡಿ, ಮನುಷ್ಯನಿಗೆ ಕಲಿಕೆ ನಿರಂತರವಾಗಿರ ಬೇಕು. ಸಹಕಾರಿ ಸಿಬ್ಬಂದಿ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧಿಸಬೇಕು. ಎಂದರು.

ಸಹಕಾರ ಸಂಘಗಳ ಉಪನಿಬಂಧಕ ಬಿ.ಎ.ಮಹದೇವಪ್ಪ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕೆ.ಗೋಪಾಲ್ ಮಾತನಾಡಿದರು. ಸಹಕಾರ ಸಂಘಗಳ ಉಪ ನಿಬಂಧಕ ಆರ್.ಜೆ.ಕಾಂತರಾಜ್, ಬೆಂಗಳೂರಿನ ಎನ್ಐಆರ್‌ಬಿ ನಿರ್ದೇಶಕ ವೆಂಕಟ ಸ್ವಾಮಿ, ಸರಸ್ವತಿ, ಡಿ.ನಾಗೇಶ್, ಎಚ್.ಡಿ.ಮಂಜುನಾಥ್  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT