ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಾರಕೀಶ್ ನಿರ್ಮಾಣದ 'ಚೌಕ' ಫೆಬ್ರವರಿ 3ಕ್ಕೆ ತೆರೆಗೆ

Last Updated 30 ಜನವರಿ 2017, 9:57 IST
ಅಕ್ಷರ ಗಾತ್ರ
ADVERTISEMENT

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಹಾಡುಗಳ ಮೂಲಕ ಎಲ್ಲರ ಮನಸ್ಸನ್ನು ಗೆದ್ದಿರುವ ದ್ವಾರಕೀಶ್‌ ನಿರ್ಮಾಣದ ಬಹುನಿರಿಕ್ಷೀತ  ಚಿತ್ರ ಚೌಕ ಇದೇ ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ.

ಈ ಚಿತ್ರದಲ್ಲಿ ಸ್ಯಾಂಡಲ್‌ವುಡ್‌ನ ನಾಲ್ವರು ಸ್ಟಾರ್ ನಟರಾದ ಪ್ರೇಮ್, ವಿಜಯ್ ರಾಘವೇಂದ್ರ, ದಿಗಂತ್, ಪ್ರಜ್ವಲ್ ದೇವರಾಜ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಗೆ ನಾಯಕಿಯರಾಗಿ ಪ್ರಿಯಾಮಣಿ, ಭಾವನಾ ಮೆನನ್, ದೀಪಾ ಸನ್ನಿಧಿ ಮತ್ತು ಐಂದ್ರಿತಾ ರೇ ನಟಿಸಿದ್ದಾರೆ.

ವಿ. ಹರಿಕೃಷ್ಣ, ಅರ್ಜುನ್ ಜನ್ಯ, ಗುರುಕಿರಣ್, ಶ್ರೀಧರ್ ಸಂಭ್ರಮ್ ಮತ್ತು ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿದ್ದು,  ಐವರು ಕ್ಯಾಮೆರಾಮ್ಯಾನ್‌ಗಳು ಛಾಯಾಗ್ರಹಣ ಮಾಡಿರುವುದು ಚಿತ್ರದ ವಿಶೇಷ.

ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್‌ ದರ್ಶನ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಟ ಪುನೀತ್‌ ರಾಜ್‌ಕುಮಾರ್‌ ಒಂದು ಹಾಡನ್ನು ಹಾಡಿದ್ದಾರೆ. ತರುಣ್ ಸುಧೀರ್ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಹೊರಹೊಮ್ಮಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT