ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛ ಕಾವೇರಿ ಕನಸು ನನಸಾಗಲಿ

Last Updated 31 ಜನವರಿ 2017, 7:09 IST
ಅಕ್ಷರ ಗಾತ್ರ

ಮಡಿಕೇರಿ: ಹರಿಯುವ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಜತೆಗೆ ಸ್ವಚ್ಛ ಕಾವೇರಿ ಕನಸು ನನಸು ಮಾಡಬೇಕಿದೆ ಎಂದು ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಹೇಳಿದರು.

ರಾಷ್ಟ್ರೀಯ ಶುಚಿತ್ವ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಡಿಕೇರಿ ವಕೀಲರ ಸಂಘ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ, ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಭಾಗಮಂಡಲದಲ್ಲಿ ನಡೆದ ಸ್ವಚ್ಛತಾ ಆಂದೋಲನದಲ್ಲಿ ಅವರು ಮಾತನಾಡಿದರು.

ಪರಿಸರಕ್ಕೆ ಹಾನಿಯಾಗದಂತೆ ಎಚ್ಚರ ವಹಿಸುವುದು ಪ್ರತಿಯೊಬ್ಬರ ಕರ್ತವ್ಯ. ಸ್ವಚ್ಛ ಮನಸ್ಸಿನೊಂದಿಗೆ ನಿರಂತರವಾಗಿ ಕಾರ್ಯಕ್ರಮಗಳು ನಡೆದಲ್ಲಿ ಮಾತ್ರ ಉದ್ದೇಶಿತ ಗುರಿಮುಟ್ಟಲು ಸಾಧ್ಯ ಎಂದು ಹೇಳಿದರು. 

ಜಿಲ್ಲಾ ಪಂಚಾಯಿತಿ ಸದಸ್ಯೆ ಕವಿತಾ ಪ್ರಭಾಕರ್, ಕಾವೇರಿಯ ಮೂಲದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರಕ್ಕೆ ವಿಶೇಷ ಅನುದಾನ ಕಲ್ಪಿಸುವುದರೊಂದಿಗೆ ನದಿಯ ಸಂರಕ್ಷಣೆಯಾಗಬೇಕಾಗಿದೆ ಎಂದು ಹೇಳಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್ ಮಾತನಾಡಿ, ನದಿಗೆ  ಕಲುಷಿತ ನೀರು ಹರಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಲಾಗಿದೆ. ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT