ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧೀಜಿ ಸ್ಮಾರಕ ಭವನ: ಪ್ರಸ್ತಾವ ಸಲ್ಲಿಕೆ

Last Updated 31 ಜನವರಿ 2017, 7:09 IST
ಅಕ್ಷರ ಗಾತ್ರ

ಮಡಿಕೇರಿ: ನಗರದ ಗಾಂಧಿ ಮಂಟಪದ ಬಳಿ ಮಹಾತ್ಮ ಗಾಂಧೀಜಿ ಸ್ಮಾರಕ ಭವನ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸರ್ವೋದಯ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್ ಮಾಹಿತಿ ನೀಡಿದರು.
  
ನಗರದಲ್ಲಿ ಸೋಮವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ  ಹಾಗೂ ಸರ್ವೋದಯ ಸಮಿತಿ ವತಿಯಿಂದ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಸರ್ಕಾರ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕಾಗಿ ₹ 3 ಕೋಟಿ ನಿಗದಿ ಮಾಡಲಾಗಿದೆ. ಈಗಾಗಲೇ ₹ 20 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಇದಕ್ಕೂ ಮೊದಲು ನಗರದ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಖಜಾನೆಯಲ್ಲಿರಿಸಲಾದ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಹೊರತೆಗೆದು, ಪುಷ್ಪಮಾಲೆಗಳಿಂದ ಸಿಂಗರಿಸಿ ಪೊಲೀಸ್ ಬ್ಯಾಂಡ್‌ನೊಂದಿಗೆ ಗಾಂಧಿ ಮೈದಾನಕ್ಕೆ ತರಲಾಯಿತು.

ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್, ಸ್ಕೌಟ್ಸ್‌ ಮತ್ತು ಗೈಡ್ಸ್, ಎನ್.ಸಿ.ಸಿ. ಹಾಗೂ ಸಂಘ–ಸಂಸ್ಥೆಗಳ ಪ್ರತಿನಿಧಿಗಳು ಗಾಂಧೀಜಿಯವರ ಚಿತಾಭಸ್ಮವನ್ನು ಹಿಡಿದು ನಗರದ ಮುಖ್ಯ ಬೀದಿಗಳ ಮೂಲಕ ಮೆರವಣಿಗೆಯಲ್ಲಿ ಸಾಗಿದರು. ನಂತರ ಗಾಂಧಿ ಮಂಟಪದಲ್ಲಿ ಇರಿಸಲಾಯಿತು.

ಗಾಂಧಿ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಇದೇ ವೇಳೆ ಪೊಲೀಸ್ ಇಲಾಖೆಯಿಂದ ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ  ಗೌರವ ಸಲ್ಲಿಸಲಾಯಿತು. ಗಾಂಧಿ ಮಂಟಪದಲ್ಲಿ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಸರ್ವಧರ್ಮ ಗುರುಗಳಿಂದ ಭಗವದ್ಗೀತೆ, ಬೈಬಲ್, ಕುರಾನ್ ಸಂದೇಶಗಳ ಪಠಣ ಮಾಡಲಾಯಿತು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚುಮ್ಮಿ ದೇವಯ್ಯ, ಪೌರಾಯುಕ್ತೆ ಬಿ. ಶುಭಾ, ಸರ್ವೋದಯ ಸಮಿತಿ ಸದಸ್ಯರಾದ ಕೋಡಿ ಚಂದ್ರಶೇಖರ್, ಅಂಬೆಕಲ್ ಕುಶಾಲಪ್ಪ, ಅಂಬೆಕಲ್ ನವೀನ್ ಇದ್ದರು.   ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಲ್ಲಿ ಇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT