ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವನ ದುರಾಸೆಯಿಂದ ಮಾಲಿನ್ಯ

ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ
Last Updated 31 ಜನವರಿ 2017, 7:32 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಮಾನವನ ದುರಾಸೆ ಯಿಂದ ನೆಲ, ಜಲ, ವಾಯುಮಂಡಲ ಮಾಲಿನ್ಯಗೊಳ್ಳುತ್ತಿದ್ದು ಪರಿಸರದ ಮೇಲೆ ತೀವ್ರ ದುಷ್ಪರಿಣಾಮ ಉಂಟು ಮಾಡು ತ್ತಿದೆ ಎಂದು ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶ ಬಿ.ಜಿ. ಪ್ರಮೋದ್‌ ಅಭಿಪ್ರಾಯಪಟ್ಟರು.

ನಗರದ ನ್ಯಾಯಾಲಯದ ಆವರಣ ದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ನಿಸರ್ಗ ಕಾಲೇಜ್‌ ಆಫ್‌ ಮ್ಯಾನೇಜ್‌ಮೆಂಟ್‌ ಆಶ್ರಯದಲ್ಲಿ ಸೋಮವಾರ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ನ್ಯಾಯಾಲಯ ಆವರಣ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವನಮಹೋತ್ಸವ: ನ್ಯಾಯಾಲಯದ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸ ಲಾಯಿತು. ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ರಾದ ಎನ್‌.ಬಿ. ಜಯಲಕ್ಷ್ಮಿ ಮಾತನಾಡಿ, ದಿನಾಚರಣೆಗಳ ಸಂದರ್ಭಗಳಲ್ಲಿ ಸಾರ್ವ ಜನಿಕ ಸ್ಥಳಗಳನ್ನು ಮಾತ್ರ ಸ್ವಚ್ಛಗೊಳಿಸಿ ಕೈತೊಳೆದುಕೊಳ್ಳದೆ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನಕ್ಕೆ ಮುಂದಾಗ ಬೇಕು ಎಂದು ತಿಳಿಸಿದರು.

ಸ್ವಚ್ಛತೆ: ಎನ್‌.ಎಸ್‌.ಎಸ್‌ ಘಟಕದ ವಿದ್ಯಾರ್ಥಿಗಳು ಶ್ರಮದಾನದ ಮೂಲಕ ನ್ಯಾಯಾಲಯದ ಆವರಣವನ್ನು ಸ್ವಚ್ಛ ಗೊಳಿಸಿದರು. ನಿಸರ್ಗ ಕಾಲೇಜ್‌ ಆಫ್‌ ಮ್ಯಾನೇಜ್‌ ಮೆಂಟ್‌ ಉಪನ್ಯಾಸಕ ದೊರೆಸ್ವಾಮಿ, ಯೋಜನಾಧಿಕಾರಿ ದಿಲೀಪ್‌, ವಿದ್ಯಾರ್ಥಿ ಪ್ರತಿನಿಧಿಗಳಾದ ಶಿವು, ಮಮತಾ, ಕರ್ನಾಟಕ ವನ್ಯಜೀವಿ ಟ್ರಸ್ಟ್‌ ಅಧ್ಯಕ್ಷ ಜಾನ್‌ಪೀಟರ್‌್, ಮಹೇಶ್‌ಕುಮಾರ್‌, ದಿವ್ಯಸುಂದರ್‌, ಮನೋಜ್‌ಕುಮಾರ್‌, ವಕೀಲರ ಸಂಘದ ಕಾರ್ಯದರ್ಶಿ ಮಸಣನಾಯಕ, ರಾಮುಲು, ಬಸವಣ್ಣ, ನಂಜಪ್ಪ, ನಟರಾಜು, ಮಹದೇವ ಸ್ವಾಮಿ, ಸಂಪತ್‌ಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT