ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಮನ ಸೆಳೆದ ವಿಜ್ಞಾನ ಮೇಳ

Last Updated 2 ಫೆಬ್ರುವರಿ 2017, 5:50 IST
ಅಕ್ಷರ ಗಾತ್ರ

ಲಕ್ಷ್ಮೇಶ್ವರ: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.4ರಲ್ಲಿ ಬುಧವಾರ ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ವಿಜ್ಞಾನ ಮೇಳ ಉದ್ಘಾಟಿಸಿ ಮಾತನಾಡಿ ಸರ್ಕಾರಿ ಶಾಲೆ­ಗಳಲ್ಲಿ ಈಚೆಗೆ ಶಿಕ್ಷಣದ ಗುಣಮಟ್ಟ ಕಡಿಮೆ ಆಗುತ್ತಿರುವುದು ವಿಷಾದನೀಯ.

ಖಾಸಗಿ ಶಾಲೆಗಳಿಗೆ ಹೋಲಿಸಿದಾಗ ಸರ್ಕಾರಿ ಶಾಲೆಗಳಲ್ಲಿಯೇ ಉತ್ತಮ ಪದವಿ ಪಡೆದ ಶಿಕ್ಷಕರು ಇರುತ್ತಾರೆ. ಆದರೆ ಪರೀಕ್ಷಾ ಫಲಿತಾಂಶ ಮಾತ್ರ ಶೂನ್ಯದತ್ತ ಸಾಗಿದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಇಲಾಖೆಯ ಹಿರಿಯ ಅಧಿಕಾರಿಗಳು ಚಿಂತನೆ ನಡೆಸಬೇಕಾದ ಅಗತ್ಯ ಇದೆ ಎಂದರು.

ಜಿಲ್ಲಾ ಅಕ್ಷರದಾಸೋಹದ ಶಿಕ್ಷಣಾಧಿ ಕಾರಿ ಮಂಗಳಾ ತಾಪಸ್ಕರ ಗಣಿತ ಮೇಳಕ್ಕೆ ಚಾಲನೆ ನೀಡಿ ಮಗುವಿನಲ್ಲಿನ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ತಕ್ಕ ಪ್ರೋತ್ಸಾಹ ನೀಡುವ ಕೆಲಸ ನಡೆ­ಯಬೇಕಿದೆ. ಆಧುನಿಕ ತಂತ್ರಜ್ಞಾನದ ಪರಿ­ಕರಗಳೊಂದಿಗೆ ಬೆಳೆಯುತ್ತಿರುವ ಮಕ್ಕಳಲ್ಲಿ ಪ್ರತಿಭೆ ಮತ್ತಷ್ಟು ದ್ವಿಗುಣ­ಗೊಂಡಿದೆ. ಕಾರಣ ಶಿಕ್ಷಕರೂ ಸಹ ಶಿಕ್ಷಣ ರಂಗದಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯ ಇದೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ಸೌಲಭ್ಯ­ಗಳನ್ನು ಎಲ್ಲ ಶಾಲೆಗಳಿಗೆ ನೀಡುತ್ತಿದ್ದು ಇದರ ಉಪಯೋಗ ಮಕ್ಕಳಿಗೆ ಸಿಗಬೇಕು ಎಂದು ತಿಳಿಸಿದರು.

ಪುರಸಭೆ ಸದಸ್ಯರಾದ ಎಂ.ಆರ್. ಪಾಟೀಲ, ಮಹೇಶ ಹೊಗೆಸೊಪ್ಪಿನ, ಅಪ­­ರಾಧಿ ವಿಭಾಗದ ಪಿಎಸ್ಆಯ್ ಬಿ.ಬಿ.­ಕೊಳ್ಳಿ, ಬಿ.ಎಸ್. ಹರ್ಲಾಪುರ, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಕ ಸಿಬ್ಬಂದಿ ಇದ್ದರು. ಮುಖ್ಯ ಶಿಕ್ಷಕಿ ಡಿ.ಎಫ್. ಪಾಟೀಲ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT