ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್ ಮುಕ್ತ ನಗರಕ್ಕೆ ಆಗ್ರಹ

Last Updated 2 ಫೆಬ್ರುವರಿ 2017, 8:50 IST
ಅಕ್ಷರ ಗಾತ್ರ
ಕಲಬುರ್ಗಿ: ಪ್ಲಾಸ್ಟಿಕ್ ಮುಕ್ತ ನಗರಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಮಠಾಧೀಶರು ನಗರದ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.
 
ನಗರದ ವಿವಿಧ ಬಡಾವಣೆಗಳಲ್ಲಿ ‘ಸ್ವಚ್ಛತೆ ಕಡೆ ಒಂದು ದಿಟ್ಟ ಹೆಜ್ಜೆ’ ಎಂಬ ಸಂಕಲ್ಪದೊಂದಿಗೆ ಪಾದಯಾತ್ರೆ ಮೂಲಕ ಅರಿವು ಮೂಡಿಸುವ ಪ್ರಮಾಣಿಕ ಪ್ರಯತ್ನ ಮಾಡಲಾಗಿದೆ. ಪ್ಲಾಸ್ಟಿಕ್ ನಿಷೇಧ ಬಳಕೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
 
ಮನವಿ ಸ್ವೀಕರಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಇಲಿಯಾಸ್ ಅಹಮ್ಮದ್, ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಲು ಈಗಾಗಲೇ ತಂಡಗಳನ್ನು ರಚಿಸಲಾಗಿದೆ. ಈ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು.  ನಗರದ ನಾಗರಿಕರು ಸಹಕರಿಸಬೇಕು ಎಂದು ಹೇಳಿದರು.
 
ಹುಬ್ಬಳ್ಳಿಯ ಸಿದ್ದಲಿಂಗ ಸ್ವಾಮೀಜಿ, ಮಾಡ್ಯಾಳ ಮರುಳಸಿದ್ದ ಸ್ವಾಮೀಜಿ, ಗೊಗ್ಗೆಹಳ್ಳಿ ಸಂಗಮೇಶ್ವರ ಸ್ವಾಮೀಜಿ, ಮೂಡಿ ಸದಾಶಿವ ಸ್ವಾಮೀಜಿ, ಜಡೆ ಹಿರೇಮಠದ ಅಮರೇಶ್ವರ ಸ್ವಾಮೀಜಿ ಇದ್ದರು.
 

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT