ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ಸಂರಕ್ಷಣೆ, ಆರೋಗ್ಯಕ್ಕೆ ಆದ್ಯತೆ

ಉಚಿತ ಗ್ಯಾಸ್ ಸ್ಟವ್, ಸಲಕರಣೆ ವಿತರಣೆ: ಸಚಿವ ರೈ
Last Updated 4 ಫೆಬ್ರುವರಿ 2017, 4:48 IST
ಅಕ್ಷರ ಗಾತ್ರ
ಬಂಟ್ವಾಳ: ‘ರಾಜ್ಯದಲ್ಲಿ ಅರಣ್ಯ ಸಂರ ಕ್ಷಣೆ ಜತೆಗೆ ಪರಿಸರ ಮಾಲಿನ್ಯ ನಿಯಂತ್ರಣ ಮತ್ತು ಮಹಿಳೆಯರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯು ವಿಶೇಷ ಘಟಕ ಯೋಜ ನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸ್ಟವ್ ಮತ್ತಿತರ ಸಲಕರಣೆ ವಿತರಿಸಲು ಮುಂ ದಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
 
ತಾಲ್ಲೂಕಿನ ಬಿ.ಸಿ.ರೋಡ್ ಸಮೀ ಪದ ಗಾಣದಪಡ್ಪುವಿನಲ್ಲಿ ಅರಣ್ಯ ಇಲಾಖೆ ಇದರ ವಿಶೇಷ ಘಟಕ ಯೋಜ ನೆಯಡಿ ಇಲ್ಲಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಒಟ್ಟು 600 ಕುಟುಂಬಗಳಿಗೆ ಉಚಿತ ಗ್ಯಾಸ್ ಸ್ಟವ್‌ ಮತ್ತಿತರ ಸಲಕರಣೆಗಳನ್ನು ಶುಕ್ರವಾರ ಸಂಜೆ ವಿತರಿಸಿ ಅವರು ಮಾತನಾಡಿದರು.
 
ಮಂಗಳೂರು ಅರಣ್ಯ ವೃತ್ತ ವ್ಯಾಪ್ತಿಯ ಬಂಟ್ವಾಳ ಮಾತ್ರವಲ್ಲದೆ ಪುತ್ತೂರು, ಮಂಗಳೂರು ತಾಲ್ಲೂಕಿನಲ್ಲಿ ಈಗಾಗಲೇ ಸುಮಾರು 3 ಸಾವಿರಕ್ಕೂ ಮಿಕ್ಕಿ ಮಂದಿ ಅರ್ಹ ಫಲಾನುಭವಿಗಳಿಗೆ ಉಚಿತ ಎಲ್ಪಿಜಿ ಸಂಪರ್ಕ ಸೌಲಭ್ಯ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿಯಾಗಿ ಮತ್ತೆ 300 ಅರ್ಹ ಕುಟುಂಬಗಳಿಗೆ ಉಚಿತ ಗ್ಯಾಸ್ ಸಂಪರ್ಕ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.   
 
ರಾಜ್ಯದಲ್ಲಿ ಪರಿಸರ ಸಮತೋಲನ ಕಾಯ್ದುಕೊಳ್ಳಲು ಶೇ.33ರಷ್ಟು ಅರಣ್ಯ ಭೂಮಿ ಅಗತ್ಯವಾಗಿದ್ದು, ಪ್ರಸಕ್ತ ಶೇ. 22ರಷ್ಟು ಮಾತ್ರ ಇದೆ. ಅರಣ್ಯ ಹಕ್ಕು ಕಾಯ್ದೆ ಉಲ್ಲಂಘಿಸದೆ ವನ್ಯಜೀವಿಗಳಿಗೂ ಬದುಕಲು ಅವಕಾಶ ನೀಡಬೇಕು ಎಂದು ತಿಳಿಸಿದರು. 
 
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂಜಯ ಬಿಜೂರ್, ಸಹಾಯಕ ಅರಣ್ಯ ಸಂರಕ್ಷಣಾ ಧಿಕಾರಿ ಕೆ.ಟಿ.ಹನುಮಂತಪ್ಪ, ವಲಯ ಅರಣ್ಯಾಧಿಕಾರಿ ಸುರೇಶ್, . ಪತ್ರಕರ್ತ ಗೋಪಾಲ ಅಂಚನ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT