ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಳ ಕ್ಷೇತ್ರ: ಬ್ರಹ್ಮಕಲಶಕ್ಕೆ ಸಜ್ಜು

Last Updated 6 ಫೆಬ್ರುವರಿ 2017, 5:20 IST
ಅಕ್ಷರ ಗಾತ್ರ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಗ್ರಾಮೀಣ ಪ್ರದೇಶ ಅರಳ ಗ್ರಾಮದಲ್ಲಿ ಸುಮಾರು 800 ವರ್ಷಗಳ ಹಿನ್ನೆಲೆ ಹೊಂದಿರುವ ಪುರಾಣ ಪ್ರಸಿದ್ಧ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ಗಂಟೆ 9.45 ಗಂಟೆಗೆ ಬ್ರಹ್ಮಶ್ರೀ ಉದಯ ಪಾಂಗ ಣ್ಣಾಯ ಇವರ ಮಾರ್ಗದರ್ಶನದಲ್ಲಿ ದೇವರಿಗೆ ಬ್ರಹ್ಮಕಲಶೋತ್ಸವವು ಸಡಗರದಿಂದ ನಡೆಯಲಿದೆ.

ಇದೇ 11 ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಸಹಿತ ನಿರಂತರವಾಗಿ ಸಾರ್ವಜನಿಕ ಅನ್ನಸಂತರ್ಪಣೆ ನಡೆ ಯುತ್ತಿದೆ. ಈಗಾಗಲೇ ಅರಳ ಮತ್ತು ಕೊಯಿಲ ಗ್ರಾಮದಿಂದ ಆಕರ್ಷಕ ಹೊರೆ ಕಾಣಿಕೆ ಮೆರವಣಿಗೆ, ಚಂಡಿಕಾಯಾಗ, ಭಜನೆ, ಯಕ್ಷಗಾನ ನಡೆದಿದೆ.

ಸೋಮವಾರ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಧಾರ್ಮಿಕ ಸಭೆ ಯಲ್ಲಿ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಬ್ರಹ್ಮಕಲ ಶೋತ್ಸವದ ಯಶಸ್ವಿಗಾಗಿ ನೂರಾರು ಮಂದಿ ಭಕ್ತರು ಶ್ರಮದಾನ ಮತ್ತಿತರ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಕ್ಷೇತ್ರದ ಆಡಳಿತ ಮೊಕ್ತೇಸರ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ.ರಾಜೇಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಗ್ಗೊಂಡೆ ಜಗದೀಶ ಆಳ್ವ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ  ಎನ್.ಎಂ.ಅಡ್ಯಂತಾಯ, ಪ್ರಧಾನ ಕಾರ್ಯದರ್ಶಿ ಎಸ್.ಮುರಳೀಧರ ಶೆಟ್ಟಿ ನೇತತ್ವದಲ್ಲಿ ವಿವಿಧ ಉಪಸಮಿತಿ ಪದಾಧಿಕಾರಿಗಳು ಸ್ವಯಂ ಸೇವಕರಾಗಿ ಶ್ರಮಿಸುತ್ತಿದ್ದಾರೆ. ಇಲ್ಲಿನ ರಸ್ತೆಯುದ್ದಕ್ಕೂ ಫ್ಲೆೆಕ್ಸ್, ಕೇಸರಿ ಬಾವುಟ, ಬಂಟಿಂಗ್ಸ್, ಬ್ಯಾನರ್ ರಾರಾಜಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT