ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಶ್ರ ಬೆಳೆ ಅಳವಡಿಕೆಗೆ ಸಲಹೆ

Last Updated 6 ಫೆಬ್ರುವರಿ 2017, 7:08 IST
ಅಕ್ಷರ ಗಾತ್ರ

ಬ್ಯಾಡಗಿ: ‘ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ರೈತರ ಬೆಳೆಗೆ ವೈಜ್ಞಾನಿಕ ಬೆಲೆ, ರಿಯಾಯ್ತಿ ದರದಲ್ಲಿ ಬೀಜ, ಗೊಬ್ಬರ, ಕಾರ್ಮಿಕರ ಸಮಸ್ಯೆಯನ್ನು ನೀಗಿಸುವಲ್ಲಿ ಕೃಷಿಕ ಸಮಾಜ ಪ್ರಮುಖ ಪಾತ್ರ ವಹಿಸಲಿದೆ’ ಎಂದು ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.

ಪಟ್ಟಣದಲ್ಲಿ ಕೃಷಿಕ ಸಮಾಜದ ನೂತನ ಕೃಷಿಕ ಭವನ, ರೈತರ ತರಬೇತಿ ಹಾಗೂ ಸಹಾಯಕ ಕೇಂದ್ರವನ್ನು ಭಾನುವಾರ ಉದ್ಘಾಟಿಸಿ ಮಾತನಾ ಡಿದರು.
ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಎಸ್‌.ಆರ್‌. ಪಾಟೀಲ ಮಾತನಾಡಿ, ‘ಈ ಕೇಂದ್ರದಲ್ಲಿ ರೈತ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರೈತರ ಅಭ್ಯುದಯಕ್ಕೆ ಬಳಕೆಯಾಗಬೇಕಾಗಿದೆ’ ಎಂದರು. ಕೃಷಿಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಾಧರ ಎಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೃಷಿಕ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಬಿ.ಕೆ.ಮಂಜುನಾಥಗೌಡ, ಪುರಸಭೆ ಅಧ್ಯಕ್ಷ ಬಸವರಾಜ ಛತ್ರದ, ಉಪಾಧ್ಯಕ್ಷೆ ಸುಧಾ ಕಳ್ಳಿಹಾಳ,
ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂತವ್ವ ಬೇವಿನಮಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಕನ್ನಪ್ಪ ಕೊಪ್ಪದ,ರೈತ ಮುಖಂಡರಾದ ನಿಂಗಪ್ಪ ಹಿತ್ತಲಮನಿ, ನಿಂಗಪ್ಪ ದೇವಗಿರಿ, ಕಲ್ಲನಗೌಡ ಪಾಟೀಲ, ಶಂಭಣ್ಣ ದಾನಪ್ಪನವರ, ಶಂಕರಗೌಡ ಪಾಟೀಲ, ಬಸವರಾಜ ಸಂಕಣ್ಣನವರ, ಅಶೋಕ ಛತ್ರದ, ಅಶೋಕ ಮಾಳೇನಹಳ್ಳಿ, ತಿರಕಪ್ಪ ಬಾಸೂರ, ಮಾಲಿಂಗಪ್ಪ ಪುಟ್ಟಣ್ಣನವರ, ಬಸವರಾಜ ಅಸುಂಡಿ, ಕರಿಯಪ್ಪ ಅಳಲಗೇರಿ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಹಾಯಕ ಕೃಷಿ ನಿರ್ದೇಶಕ ಅಮೃತೇಶ್ವರ ಎನ್‌.ಜಿ ಸ್ವಾಗತಿಸಿದರು. ತಾಂತ್ರಿಕ ಸಹಾಯಕ ಬಸವರಾಜ ಮರಗಣ್ಣನವರ ನಿರೂಪಿಸಿ ವಂದಿಸಿದರು.

*
ರೈತರು ಒಂದೇ ಬೆಳೆಗೆ ಜೋತು ಬೀಳದೇ, ಮಿಶ್ರಬೆಳೆ ಪದ್ಧತಿಯನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕಿದೆ.
-ಬಿ.ಕೆ.ಮಂಜುನಾಥಗೌಡ,
ಕೃಷಿಕ ಸಮಾಜ ರಾಜ್ಯ ಘಟಕದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT