ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯ ಬಿಡಿ; ದಡಾರ,ರುಬೆಲ್ಲಾ ಲಸಿಕೆ ಹಾಕಿಸಿ

ಲಸಿಕೆ ಆಂದೋಲನ ಯಶಸ್ಸಿಗೆ ಸಹಕರಿಸಲು ಪೋಷಕರಲ್ಲಿ ಅಧಿಕಾರಿಗಳ ಮನವಿ
Last Updated 8 ಫೆಬ್ರುವರಿ 2017, 6:22 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಂಗಳವಾರ ದಡಾರ ಮತ್ತು ರುಬೆಲ್ಲಾ ಲಸಿಕಾ ಆಂದೋಲನ ಆರಂಭಗೊಂಡಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಆರೋಗ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲಯನ್ಸ್, ರೋಟರಿ ಹಾಗೂ ಇತರೆ ಸಂಘ, ಸಂಸ್ಥೆಗಳ ಸಹ ಯೋಗದಲ್ಲಿ ಆಂದೋಲನ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ‘ಜಿಲ್ಲೆಯಾದ್ಯಂತ ಲಸಿಕೆ ಹಾಕಲು 2,600 ಶಾಲೆಗಳನ್ನು ಗುರುತಿಸಲಾಗಿದೆ. ಶಾಲಾ ಮಕ್ಕಳಿಗೆ ಮಾತ್ರ ಲಸಿಕೆ ಹಾಕಲಾಗುತ್ತಿದೆ. ಮುಂದಿನ ವಾರ ಅಂಗನವಾಡಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಲಸಿಕಾ ಅಭಿಯಾನ ವಿಸ್ತರಿಸಲಾಗುವುದು’ ಎಂದು ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ 9ರಿಂದ 15 ವರ್ಷದೊಳಗಿನ 4.23 ಲಕ್ಷ ಮಕ್ಕಳಿ ದ್ದಾರೆ. ಇವರಲ್ಲಿ 2.63 ಲಕ್ಷ ಮಕ್ಕಳು ಶಾಲೆಗೆ ತೆರಳುತ್ತಾರೆ. ಇನ್ನುಳಿದವರು ಶಾಲೆಯಿಂದ ಹೊರಗುಳಿದವರು. ದಿನವೊಂದಕ್ಕೆ ಒಬ್ಬ ಶುಶ್ರೂಷಕಿ 200 ಮಕ್ಕಳಿಗೆ ಮಾತ್ರ ಲಸಿಕೆ ಹಾಕಲು ಸೂಚಿಸಲಾಗಿದೆ.  ಒಂದು ಶಾಲೆಯಲ್ಲಿ 600 ಮಕ್ಕಳಿದ್ದರೆ, 3 ಜನ ಶುಶ್ರೂಷಕಿಯರನ್ನು ಕಳುಹಿಸ ಲಾಗುವುದು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಸುಮಾರು 129 ಸೂಕ್ಷ್ಮ ಪ್ರದೇಶಗಳಿದ್ದು, ಲಸಿಕೆ ಅಭಿಯಾನ ಕಷ್ಟ ಎನ್ನುವ ಪರಿಸ್ಥಿತಿ ಇದೆ. ಸಾಗರ, ತೀರ್ಥಹಳ್ಳಿ ಹಾಗೂ ಹೊಸನಗರ ಭಾಗಗಳಲ್ಲಿ ಗುಡ್ಡಗಾಡು ಪ್ರದೇಶಗಳು ಹೆಚ್ಚಿವೆ. ಆ ಪ್ರದೇಶದ ಪೋಷಕರು ಸಮೀಪದ ಅಂಗನವಾಡಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಕ್ಕ ಳನ್ನು ಕರೆತಂದು ಲಸಿಕೆ ಹಾಕಿಸಬೇಕು’ ಎಂದು ಮನವಿ ಮಾಡಿದರು. ‘ಲಸಿಕೆ ಹಾಕುವ ಸಂದರ್ಭದಲ್ಲಿ ಮಕ್ಕಳೊಂದಿಗೆ ಪೋಷಕರು ಕಡ್ಡಾಯವಾಗಿ ಹಾಜರಿರಬೇಕು’ ಎಂದು ಆರೋಗ್ಯಾಧಿಕಾರಿ ತಿಳಿಸಿದರು.

ಜಿಲ್ಲಾಧಿಕಾರಿ ಚಾಲನೆ: ‘ದಡಾರ ಮತ್ತು ರುಬೆಲ್ಲಾ ಲಸಿಕಾ ಆಂದೋಲನ ಯಶಸ್ಸಿಗೆ ಪೋಷಕರ ಸಹಕಾರವೂ ಮುಖ್ಯ’ ಎಂದು ಜಿಲ್ಲಾಧಿಕಾರಿ ಎಂ.ಲೋಕೇಶ್ ಹೇಳಿದರು.

ನಗರದ ವಾಸವಿ ಶಾಲೆಯಲ್ಲಿ ಲಸಿಕಾ ಆಂದೋಲನಕ್ಕೆ ಚಾಲನೆ ನೀಡಿ ಮಾತ ನಾಡಿದ ಅವರು, ‘ದಡಾರ ಮಾರ ಣಾಂತಿಕ ಕಾಯಿಲೆ ಯಾಗಿರುವುದರಿಂದ 9 ತಿಂಗಳಿಂದ 15 ವರ್ಷದ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕಿದೆ. ಪೋಷಕರು ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಆಂದೋಲನಕ್ಕೆ ಸಂಪೂರ್ಣ ಸಹಕಾರ ನೀಡಬೇಕು’ ಎಂದರು.

‘ಜನಿಸುವ ಮಗುವಿಗೆ ಕುರುಡು, ಮಾನಸಿಕ ಅಸ್ವಸ್ಥತೆ, ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ಹುಟ್ಟಿನ ನ್ಯೂನತೆ ನಿಯಂತ್ರಿಸುವ ಉದ್ದೇಶದಿಂದ ಗರ್ಭಿಣಿ ಯರಿಗೆ ರುಬೆಲ್ಲಾ ಲಸಿಕೆ ಹಾಕಲಾಗುತ್ತದೆ. ಈ ಲಸಿಕಾ ಆಂದೋಲನಕ್ಕೆ ಸಾರ್ವ ಜನಿಕರ ಸಹಕಾರ ದೊರೆತಲ್ಲಿ ಶೇ 100 ರಷ್ಟು ಯಶಸ್ವಿಯಾಗುತ್ತದೆ’ ಎಂದರು.

ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಲಯನ್ಸ್ ಶಿವಮೊಗ್ಗ ಸಂಸ್ಥೆಯ ಅಧ್ಯಕ್ಷ ಪಾಲ್ ಗೋವಿಯಸ್, ಸಂಚಾಲಕ ಡಾ.ಬಿರಾದಾರ್, ದಡಾರ ಮತ್ತು ರುಬೆಲ್ಲಾ ಲಸಿಕಾ ಆಂದೋಲನದ ನೋಡಲ್ ಅಧಿಕಾರಿ ಡಾ.ವೀಣಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಚಾದೊ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಸುರೇಶ್, ಡಾ.ರಾಜೇಶ್ ಸುರಗೀಹಳ್ಳಿ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT