ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುರುಕಾಗಿ ಕಾರ್ಯನಿರ್ವಹಿಸಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
Last Updated 8 ಫೆಬ್ರುವರಿ 2017, 7:50 IST
ಅಕ್ಷರ ಗಾತ್ರ

ಮಡಿಕೇರಿ: ಅಲ್ಪಸಂಖ್ಯಾತರ ಶ್ರೇಯೋ ಭಿವೃದ್ಧಿಗೆ ಪ್ರಧಾನ ಮಂತ್ರಿಯವರ 15 ಅಂಶಗಳ ಕಾರ್ಯಕ್ರಮಗಳ ಕುರಿತು ಜಿಲ್ಲೆಯ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಮಾಹಿತಿ ಕಾರ್ಯಾಗಾರ ಆಯೋಜಿಸಲು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.
ಅಲ್ಪಸಂಖ್ಯಾತರಿಗೆ ಹಲವು ಕಾರ್ಯಕ್ರಮಗಳು ಇವೆ. ಆದರೆ, ನಾನಾ ಇಲಾಖೆಗಳಲ್ಲಿ ಪ್ರಗತಿ ತುಂಬಾ ಕಡಿಮೆಯಿದೆ. ಅಧಿಕಾರಿಗಳು ಚುರುಕಾಗಬೇಕು ಎಂದು ಎಚ್ಚರಿಸಿದರು. 

ಅಲ್ಪಸಂಖ್ಯಾತರ ಮಕ್ಕಳಿಗಾಗಿ ಅಂಗನವಾಡಿ ಮೂಲಕ ಪೌಷ್ಟಿಕ ಆಹಾರ ವಿತರಣೆ, ಸಾಲ ಸೌಲಭ್ಯ, ವಿದ್ಯಾರ್ಥಿ ವೇತನ, ಸ್ವ–ಉದ್ಯೋಗ ಕೈಗೊಳ್ಳಲು ತರಬೇತಿ, ನಾಗರಿಕ ಸೇವೆಗಳ ತರಬೇತಿ, ವಸತಿ ಸೌಲಭ್ಯ, ಕೃಷಿ, ತೋಟಗಾರಿಕೆ, ಉದ್ಯೋಗಿನಿ ಯೋಜನೆ, ಆಧಾರ, ಪಠ್ಯ ಪುಸ್ತಕ, ವೃತ್ತಿ ಕೌಶಲ ತರಬೇತಿ, ಸ್ವಾವಲಂಬನೆ, ಅರಿವು, ಶ್ರಮಶಕ್ತಿ, ಮೈಕ್ರೋ ಸಾಲ ಯೋಜನೆ, ಗಂಗಾ ಕಲ್ಯಾಣ ಹೀಗೆ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಈ  ಕಾರ್ಯಾಗಾರ ಸಂಬಂಧ ಮೊದಲೇ ಮಾಹಿತಿ ನೀಡುವಂತಾಗಬೇಕು ಎಂದು ಸೂಚಿಸಿದರು.

ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಕೆ.ವಿ. ಸುರೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ರಾಮಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಆರ್.ಬಸವರಾಜ, ಪೌರಾಯುಕ್ತೆ ಬಿ.ಶುಭಾ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕೆ.ಎ.ದೇವಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಮ್ತಾಜ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ, ವಿಕಲಚೇತನರ ಅಧಿಕಾರಿ ಎನ್.ಎಂ.ಜಗದೀಶ್ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT