ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಸಿ.ಟಿ.ವಿ ಬೇಕು

Last Updated 9 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ

ದಿನನಿತ್ಯ ರೈಲುಗಳಲ್ಲಿ ಸಂಚರಿಸುವ ಲಕ್ಷಾಂತರ ಮಂದಿಯ ಹಿತದೃಷ್ಟಿಯಿಂದ ರೈಲ್ವೆ ಇಲಾಖೆ  ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ರೈಲುಗಳ ಒಳಗೆ ಸಾರ್ವಜನಿಕರಿಗಾಗುವ ಹಲವಾರು ಸಮಸ್ಯೆಗಳು ಬೆಳಕಿಗೆ ಬರುವುದು ವಿರಳ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಇರುವಂತೆ ರೈಲು ಬೋಗಿಗಳಲ್ಲೂ ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಅಳವಡಿಸಲು ಇಲಾಖೆ ಕ್ರಮ ಕೈಗೊಳ್ಳಬೇಕು. ಬೋಗಿಗಳ ಪ್ರವೇಶ ದ್ವಾರಗಳ ಬಳಿ, ಒಳಭಾಗದ ದೃಶ್ಯಗಳ ಚಿತ್ರೀಕರಣ ಸಾಧ್ಯವಾಗುವಂತೆ ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಅಳವಡಿಸಬೇಕು.ರೈಲಿನಲ್ಲಿ ಮಹಿಳೆಯರು, ಮಕ್ಕಳಿಗೆ ಆಗಬಹುದಾದ ದೈಹಿಕ, ಮಾನಸಿಕ ಹಿಂಸೆ, ಕಳ್ಳತನದಂತಹ ಪ್ರಕರಣಗಳನ್ನು ತಡೆಗಟ್ಟಬಹುದು.
-ಮಹದೇವಪ್ಪ ಪಿ., ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT