ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತನಿಂದ ಲಂಚ ಪಡೆವಾಗ ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

Last Updated 10 ಫೆಬ್ರುವರಿ 2017, 13:09 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕು ಕಟ್ಟಿಸಂಗಾವಿ ಗ್ರಾಮದ ಗ್ರಾಮಲೆಕ್ಕಿಗ ಸೂರ್ಯಕಾಂತ ಅವರು ಪಹಣಿ ತಿದ್ದುಪಡಿಗಾಗಿ ರೈತನಿಂದ ಶುಕ್ರವಾರ ಲಂಚ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ದಾಳಿ ನಡೆಸಿದ್ದಾರೆ.

ಜೇವರ್ಗಿ ತಹಸೀಲ್ದಾರ್‌ ಕಚೇರಿ ಪಕ್ಕದ ಕ್ಯಾಂಟಿನ್‌ನಲ್ಲಿ ಕುಳಿತು ₹9 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಪಹಣಿ ತಿದ್ದುಪಡಿಗಾಗಿ ರೈತ ಹಣಮಂತ ತಳವಾರ ಅವರಿಗೆ ಒಟ್ಟು ₹15 ಸಾವಿರ ಲಂಚದ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಗ, ಈ ಮೊದಲು ₹6 ಸಾವಿರ ಪಡೆದುಕೊಂಡಿದ್ದರು. ಇನ್ನುಳಿದ ಮೊತ್ತ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಡಿವೈಎಸ್‌ಪಿ ಸಂತೋಷ ಬನಹಟ್ಟಿ ನೇತೃತ್ವದಲ್ಲಿ ಎಸಿಬಿ ಪೊಲೀಸರು ದಾಳಿ ನಡೆಸಿದರು. ಗ್ರಾಮ ಲೆಕ್ಕಿಗನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT