ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುತ್ತೋಲೆಯ ಸುತ್ತ...

Last Updated 10 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ

ನ್ಯಾಯಾಲಯಗಳ ಸಮಾರಂಭಗಳಲ್ಲಿ ಶಾಸಕರು ಹಾಗೂ ಸಚಿವರ ಪಾಲ್ಗೊಳ್ಳುವಿಕೆಯನ್ನು ನಿರ್ಬಂಧಿಸಿ ಹೈಕೋರ್ಟ್ ಹೊರಡಿಸಿರುವ ಸುತ್ತೋಲೆ ವಿರುದ್ಧ ವಿಧಾನ ಪರಿಷತ್‌ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸುತ್ತೋಲೆಯು ಶಾಸಕಾಂಗಕ್ಕೆ ಮಾಡಿರುವ ಅವಮಾನ ಎಂದಿದ್ದಾರೆ.

ನ್ಯಾಯಾಲಯಗಳ ಸಮಾರಂಭಗಳಲ್ಲಿ ಶಾಸಕರು ಹಾಗೂ ಸಚಿವರ ಪಾಲ್ಗೊಳ್ಳುವಿಕೆಯನ್ನು ನಿರ್ಬಂಧಿಸುವ ಬದಲಾಗಿ ಶಾಸಕರು ಮತ್ತು ಸಚಿವರು ಭಾಗವಹಿಸುವ ಸಮಾರಂಭಗಳಲ್ಲಿ ನ್ಯಾಯಾಧೀಶರು, ನ್ಯಾಯಮೂರ್ತಿಗಳು ಪಾಲ್ಗೊಳ್ಳುವುದನ್ನು ನಿರ್ಬಂಧಿಸಿ ಸುತ್ತೋಲೆ ಹೊರಡಿಸಿದ್ದರೆ ಆ ಸುತ್ತೋಲೆ ಅರ್ಥಪೂರ್ಣವಾಗುತ್ತಿತ್ತು.

ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಹಮ್ಮಿಕೊಳ್ಳಲಾಗುವ ವಿವಿಧ ಕಾರ್ಯಕ್ರಮಗಳಲ್ಲಿ ವೇದಿಕೆಯ ಮೇಲೆ ನ್ಯಾಯಾಧೀಶರು, ನ್ಯಾಯಮೂರ್ತಿಗಳ ಆಸುಪಾಸಿನಲ್ಲಿ ಕುಳಿತುಕೊಳ್ಳುವ ಅತಿಥಿಗಳ ವಿಚಾರವಾಗಿ ನ್ಯಾಯಾಧೀಶರಿಗೇ ಅಸಮಾಧಾನವಿದೆ. 
–ಪಿ.ಜೆ.ರಾಘವೇಂದ್ರ, ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT