ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದಿಂದ ಮಕ್ಕಳ ಆರೋಗ್ಯ ರಕ್ಷಣೆಗೆ ಆದ್ಯತೆ

ವಿದ್ಯಾರ್ಥಿಗಳಿಗೆ ಜಂತುಹುಳು ನಿವಾರಣೆ ಮಾತ್ರೆ ವಿತರಣೆ
Last Updated 11 ಫೆಬ್ರುವರಿ 2017, 9:44 IST
ಅಕ್ಷರ ಗಾತ್ರ

ಚಾಮರಾಜನಗರ: ‘ರಾಜ್ಯ ಸರ್ಕಾರ ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚಿನ ಒತ್ತು ನೀಡಿದೆ’ ಎಂದು ಜಿಲ್ಲಾ ಪಂಚಾಯಿತಿಯ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಪಿ. ಸದಾಶಿವಮೂರ್ತಿ ಸಲಹೆ ನೀಡಿದರು.

ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಶುಕ್ರವಾರ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಹಮ್ಮಿ ಕೊಂಡಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಸ್ತುತ ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಲಾಗುತ್ತಿದೆ. ದಡಾರ ಮತ್ತು ರುಬೆಲ್ಲಾ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಕ್ಕಳಿಗೆ ಕಾಡುವ ಮಾರಕ ರೋಗಗಳ ತಡೆಗೆ ಕ್ರಮ ವಹಿಸಿದೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ. ಚಂದ್ರು ಮಾತನಾಡಿ, ಜಂತುಹುಳು ಮಾತ್ರೆ ನುಂಗುವುದರಿಂದ ಮನುಷ್ಯನ ಆರೋಗ್ಯ ವೃದ್ಧಿಸಲಿದೆ. ಮಕ್ಕಳು ಈ ಮಾತ್ರೆ  ಸೇವಿಸುವುದರಿಂದ ಅವರ ಆರೋಗ್ಯ ಮತ್ತು ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್‌ ಮಾತನಾಡಿ, ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಸರ್ಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಎಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಪರಿಸರದ ಸ್ವಚ್ಛತೆ ಕಾಪಾಡಿ ಕೊಂಡರೆ ಯಾವುದೇ ರೋಗ ಕಾಡುವು ದಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಶಾಲಾ ಮಕ್ಕಳ ಆರೋಗ್ಯದ ದೃಷ್ಟಿ ಯಿಂದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಆಚರಿಸುತ್ತಿದೆ. ಜಂತು ಹುಳು ಮಕ್ಕಳ ಹೊಟ್ಟೆಯಲ್ಲಿ ಇದ್ದರೆ ರಕ್ತಹೀನತೆ ಮತ್ತು ಅಪೌಷ್ಟಿಕತೆಗೆ ತುತ್ತಾಗುತ್ತಾರೆ. ಸುಸ್ತು ಹಾಗೂ ನಿಶ್ಯಕ್ತಿ ಯಿಂದ ಬಳಲುತ್ತಾರೆ ಎಂದರು.

ಜಂತುಹುಳು ಬಾಧಿತ ಮಕ್ಕಳ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗಲಿದೆ. ಮಕ್ಕಳ ಆರೋಗ್ಯ ರಕ್ಷಣೆಯ ದೃಷ್ಟಿದಿಂದ 1ರಿಂದ 19ವರ್ಷದೊಳಗಿನ ಎಲ್ಲ ಮಕ್ಕಳಿಗೆ ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಉಚಿತವಾಗಿ ಜಂತುಹುಳು ನಿವಾರಣೆ ಮಾತ್ರೆ ನೀಡಲಾಗುತ್ತಿದೆ ಎಂದರು.

ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಪಿ.ಎನ್. ದಯಾನಿಧಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಕೆ.ಎಂ. ವಿಶ್ವೇಶ್ವರಯ್ಯ, ತಾಲ್ಲೂಕು ವೈದ್ಯಾಧಿಕಾರಿ ಡಾ.ಶ್ರೀನಿ ವಾಸ್, ಉಪ ಪ್ರಾಶುಪಾಲ ಎಚ್.ಎನ್. ನಂಜುಂಡಯ್ಯ, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT