ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರಗತಿ ಬಹಿಷ್ಕರಿಸಿ ಧರಣಿ

ವಿವಿಧ ಬೇಡಿಕೆ ಈಡೇರಿಕೆಗೆ ಉಪನ್ಯಾಸಕರ ಆಗ್ರಹ
Last Updated 11 ಫೆಬ್ರುವರಿ 2017, 11:03 IST
ಅಕ್ಷರ ಗಾತ್ರ

ಪಾವಗಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ  ಶುಕ್ರವಾರ ತರಗತಿ ಬಹಿಷ್ಕರಿಸಿ ಪ್ರತಿಭಟಿಸಿದರು.

ಅತಿಥಿ ಉಪನ್ಯಾಸಕರಿಗೆ ಸೇವೆ ಕಾಯಂ, ಸೇವಾ ಭದ್ರತೆ ಸೇರಿದಂತೆ ಯಾವ ಸವಲತ್ತು ಸರ್ಕಾರ ನೀಡಿಲ್ಲ. ವರ್ಷದಲ್ಲಿ ಕೇವಲ 10 ತಿಂಗಳ ವೇತನ ನೀಡಲಾಗುತ್ತಿದೆ. ಮೂರ್ನಾಲ್ಕು ತಿಂಗಳಿಗೆ ಒಮ್ಮೆ ವೇತನ ಬಟವಾಡೆ ಮಾಡಲಾಗುತ್ತಿದೆ. ಇದರಿಂದ ಜೀವನ ಸಾಗಿಸಲು ತ್ರಾಸದಾಯಕವಾಗಿದ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅತಿಥಿ ಉಪನ್ಯಾಸಕ ನಾಗೇಂದ್ರಪ್ಪ ಮಾತನಾಡಿ, ನೆರೆಯ ರಾಜ್ಯಗಳಲ್ಲಿ ಮಾಸಿಕ ₹ 20 ಸಾವಿರಕ್ಕಿಂತಲೂ ಹೆಚ್ಚಿನ ವೇತನ ನೀಡಲಾಗುತ್ತಿದೆ. ಆದರೆ ರಾಜ್ಯದಲ್ಲಿ ಅತ್ಯಂತ ಕಡಿಮೆ ವೇತನ ನೀಡಲಾಗುತ್ತಿದೆ ಎಂದರು.

ಸೇವಾ ಹಿರಿತನ ಆಧರಿಸಿ ಕಾಯಂಗೊಳಿಸಬೇಕು ಎಂದು ಹಲವು ಬಾರಿ ಸರ್ಕಾರದ ಮೇಲೆ ಒತ್ತಡ ಹೇರಲಾಗಿದೆ. ಪ್ರತಿಭಟನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳು, ಸಚಿವರಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು. ಉಪನ್ಯಾಸಕರಾದ ನಾಗೇಂದ್ರಪ್ಪ, ಹನುಮಂತರಾಯಪ್ಪ, ಧನಂಜಯ, ನಾಗೇಶ, ಅಶ್ವಿನಿ, ಶ್ರೀನಿವಾಸ, ಅಶ್ವತಮ್ಮ, ಗೋಪಾಲರೆಡ್ಡಿ, ಚಂದ್ರಶೇಖರ್ ಪ್ರತಿಭಟನೆಯಲ್ಲಿ ಇದ್ದರು.

ಬಹುತೇಕ ತರಗತಿ ನಡೆಯುತ್ತಿಲ್ಲ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳಿಂದ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿರುವುದರಿಂದ ತರಗತಿಗಳು ನಡೆಯುತಿಲ್ಲ. ಸರ್ಕಾರಿ ಪದವಿ ಕಾಲೇಜಿನಲ್ಲಿ 60 ಮಂದಿ, ಮಹಿಳಾ ಕಾಲೇಜಿನಲ್ಲಿ 30 ಮಂದಿ ಅತಿಥಿ ಉಪನ್ಯಾಸಕರು ಇದ್ದಾರೆ. ಬೆರಳೆಣಿಕೆಯಷ್ಟು ಸಂಖ್ಯೆಯಲ್ಲಿ ಕಾಯಂ ಉಪನ್ಯಾಸಕರಿದ್ದು, ಬಹುತೇಕ ತರಗತಿಗಳು ನಡೆಯುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಕಾಲೇಜಿಗೆ ಬಂದರೂ ಪ್ರಯೋಜನವಿಲ್ಲದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT