ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಪೋರೇಷನ್‌ ಬ್ಯಾಂಕ್‌ಗೆ ಲಾಭ

Last Updated 11 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ

ಮಂಗಳೂರು: ಕಾರ್ಪೋರೇಷನ್‌ ಮೂರನೇ ತ್ರೈಮಾಸಿಕ ಅವಧಿಯಲ್ಲಿ ₹ 159 ಕೋಟಿ ನಿವ್ವಳ ಲಾಭ ಗಳಿಸಿದೆ. ಇದರೊಂದಿಗೆ ನಷ್ಟದ ಸುಳಿಯಿಂದ ಬ್ಯಾಂಕ್‌ ಹೊರಬಂದಿದೆ.

ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೂರನೇ ತ್ರೈಮಾಸಿಕ ಅವಧಿಯ ವಹಿವಾಟು ವಿವರಗಳನ್ನು ಪ್ರಕಟಿಸಿದ   ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಜೈಕುಮಾರ್‌ ಗರ್ಗ್‌, ‘2015–16ನೇ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕ ಅವಧಿಯಲ್ಲಿ ಬ್ಯಾಂಕ್‌ ₹ 388 ಕೋಟಿಗಳಷ್ಟು ನಿವ್ವಳ ನಷ್ಟದಲ್ಲಿತ್ತು. ಅದಕ್ಕೆ ಹೋಲಿಸಿದರೆ ಲಾಭ ಗಳಿಕೆಯಲ್ಲಿ ಈ ವರ್ಷ ಶೇ 141ರಷ್ಟು ಹೆಚ್ಚಳವಾಗಿದೆ’ ಎಂದರು.

‘ಚಾಲ್ತಿ ಖಾತೆ ಮತ್ತು ಉಳಿತಾಯ ಖಾತೆಗಳಲ್ಲಿನ ಠೇವಣಿಗಳಲ್ಲಿ ಶೇ 38ರಷ್ಟು ಹೆಚ್ಚಳವಾಗಿದೆ. ಬ್ಯಾಂಕ್‌ನ ಬಡ್ಡಿ ಆದಾಯ ₹1,007  ಕೋಟಿಯಿಂದ ₹ 1,230 ಕೋಟಿಗೆ ಹೆಚ್ಚಳವಾಗಿದೆ. ಬಡ್ಡಿಯೇತರ ವರಮಾನ ₹ 417 ಕೋಟಿಯಿಂದ ₹ 886 ಕೋಟಿಗೆ ಹೆಚ್ಚಳವಾಗಿದೆ. ಇವೆಲ್ಲವೂ ಲಾಭ ಗಳಿಕೆಗೆ ಕಾರಣವಾಗಿವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT