ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರು ಮತ್ತು ಮೇವಿಗೆ ಕ್ರಮವಹಿಸಿ

ಯಾದಗಿರಿ: ಬರ ನಿರ್ವಹಣೆ ಸಭೆಯಲ್ಲಿ ಜಿಲ್ಲಾಧಿಕಾರಿ ಖುಷ್ಬೂ ಗೋಯೆಲ್‌ ಚೌಧರಿ ಸೂಚನೆ
Last Updated 12 ಫೆಬ್ರುವರಿ 2017, 11:50 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಬರ ಆವರಿಸಿರುವುದರಿಂದ ಕುಡಿಯುವ ನೀರು, ಜಾನುವಾರುಗಳಿಗೆ ಅಗತ್ಯ ಮೇವು ಪೂರೈಕೆಗೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಖುಷ್ಬೂ ಗೋಯೆಲ್ ಚೌಧರಿ ಅಧಿಕಾರಿಗಳಿಗೆ ಸೂಚಿಸಿದರು.

ಬರಗಾಲದ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ  ನಡೆದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು 1,151 ಎನ್‌ಆರ್‌ಡಿಡಬ್ಲ್ಯೂಪಿ ಯೋಜನೆ ಅಡಿ ಕಾಮಗಾರಿಗಳು ಕೈಗೆತ್ತಿ ಕೊಳ್ಳಲಾಗಿದ್ದು, 74  ಕಾಮಗಾರಿಗಳನ್ನು ಮಾರ್ಚ್ ಅಂತ್ಯದವರೆಗೆ ಮತ್ತು 134 ಎಲ್‌ಪಿಸಿಡಿಯ ಕಾಮಗಾರಿಗಳನ್ನು ಏಪ್ರಿಲ್ ಅಂತ್ಯದೊಳಗೆ ಪೂರ್ಣ ಗೊಳಿಸಬೇಕು ಎಂದು ಅಧಿಕಾರಿಗಳಿಗೆ ಅವರು ತಾಕೀತು ಮಾಡಿದರು.

‘2015-16ನೇ ಸಾಲಿನ ಮುಂದುವರಿದ ಒಟ್ಟು 86 ಕಾಮ ಗಾರಿಗಳನ್ನೂ ಸಹ ಮಾರ್ಚ್ ನಲ್ಲಿ ಪೂರ್ಣಗೊಳಿಸಿ, ಕುಡಿಯುವ ನೀರು ಅಭಾವ ಉಂಟಾಗದಂತೆ ಅಗತ್ಯ ಕ್ರಮ ವಹಿಸುವಂತೆ ಸಭೆಯಲ್ಲಿ ಹಾಜರಿದ್ದ ಗ್ರಾಮೀಣ ಕುಡಿಯುವ ನೀರು ಸರಬ ರಾಜು ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಖುಷ್ಬೂ ಸೂಚಿಸಿದರು.

ಕಳೆದ ಬಾರಿ ಟ್ಯಾಂಕರ್ ಮೂಲಕ 24 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗಿತ್ತು, ಸುರಪುರ ತಾಲ್ಲೂಕಿನ ನಗನೂರ ಹಾಗೂ ಖಾನಾಪುರ ಎಸ್.ಕೆ ಗ್ರಾಮದಲ್ಲಿ ಮಾತ್ರ ಮಳೆಯ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಉಂಟಾ ಗಿರುವುದರಿಂದ 15 ದಿವಸ ಹೆಚ್ಚಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಿರುವ ಬಿಲ್ಲು ಪಾವತಿಸುವ ಕುರಿತು ಸುರಪುರ ತಹಶೀಲ್ದಾರ್‌ ಅವರಿಗೆ ಸೂಚಿಸಿದರು.

ಸುರಪುರ, ಶಹಾಪುರ ಹಾಗೂ ಯಾದಗಿರಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ತಾಲ್ಲೂಕು ಮಟ್ಟದಲ್ಲಿ ಪೂರ್ವಭಾವಿ ಸಭೆಯನ್ನು ತಾಲ್ಲೂಕುಮಟ್ಟದ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಕಾರ್ಯದರ್ಶಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕಂದಾಯ ಇಲಾಖೆಯ ತಹಶೀಲ್ದಾರರು, ವಿಶೇಷ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಹಾಗೂ ಇತರೆ ಸಂಬಂಧಿತ ಅಧಿಕಾರಿಗಳನ್ನೊಳಗೊಂಡ ಸಭೆಯನ್ನು ನಡೆಸಲು ದಿನ ನಿಗದಿಪಡಿಸಿದರು. ಫೆ.13ರಂದು ಸುರಪುರ, ಫೆ.14ರಂದು ಶಹಾಪುರ ಹಾಗೂ ಫೆ.15ರಂದು ಯಾದಗಿರಿ ತಾಲ್ಲೂಕುಗಳ ಸಭೆಯನ್ನು ನಡೆಸಲು  ಸೂಚಿಸಿದರು.

2016-17ನೇ ಸಾಲಿನಲ್ಲಿ ಶಹಾಪುರ ತಾಲ್ಲೂಕನ್ನು ಬರಗಾಲ ಪ್ರದೇಶ ಎಂದು ಸರ್ಕಾರ ಘೋಷಿಸಿದ್ದು, ಸದರಿ ತಾಲ್ಲೂಕಿಗೆ ಕುಡಿಯುವ ನೀರಿನ ಸಮಸ್ಯೆ ಇರುವಂತಹ ಗ್ರಾಮಗಳನ್ನು ಗುರುತಿಸಿ ಅಲ್ಲಿ ಕುಡಿಯುವ ನೀರಿನ ವ್ಯವಸ್ಥೆಗಾಗಿ ₹ 50 ಲಕ್ಷ ಅಂದಾಜು ಮೊತ್ತಕ್ಕೆ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ, ಸಲ್ಲಿಸಲು  ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಸದರಿ ಕ್ರಿಯಾ ಯೋಜನೆ ಅಡಿಯಲ್ಲಿ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಒಳಪಡುವ ಕಾಮಗಾರಿಗಳನ್ನು ಹೊರ ತುಪಡಿಸಿ ಬರಗಾಲದ ಕಾಮಗಾರಿಗಳ ಅಡಿಯಲ್ಲಿ ಕೈಗೆತ್ತಿಕೊಳ್ಳಲು ಜಿಲ್ಲಾಧಿಕಾರಿ  ಸೂಚಿಸಿದರು.

ಕುಡಿಯುವ ನೀರಿಗೆ ಕ್ರಮ: ಜಿಲ್ಲೆಯ ನಗರ ಪ್ರದೇಶಗಳಲ್ಲಿ ಯಾವುದೇ ರೀತಿಯ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಲು ಸಭೆಯಲ್ಲಿ ಹಾಜರಿದ್ದ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಕರಿಗೆ ತಿಳಿಸಲಾಯಿತು. ಶಹಾಪುರ ಪಟ್ಟಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆಗಿರುವ ಕಡಿಮೆ ಅವಧಿಯ ಟೆಂಡರ್ ಪ್ರಕ್ರಿಯೆ ಕಾಮಗಾರಿಯನ್ನು  ಮಾರ್ಚ್‌ 5 ರೊಳಗಾಗಿ ಪೂರ್ಣಗೊಳಿಸಲು ಅವರು ಸೂಚಿಸಿದರು.

ಸುರಪುರ ಪಟ್ಟಣಕ್ಕೆ ಸಂಬಂಧಿ ಸಿದಂತೆ ಮೇತಿಂಗಳಿನಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕಾಗುತ್ತದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಕರು ಸಭೆಯ ಗಮನಕ್ಕೆ ತಂದರು.  ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗೆ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಅನು ದಾನದಲ್ಲಿ ಮೂರು ನೀರಿನ ಟ್ಯಾಂಕರ್ ಸರಬರಾಜು ಆಗಿದ್ದು, ಅವುಗಳನ್ನು ಬಳಸಿಕೊಳ್ಳಲು ಕಾರ್ಯನಿರ್ವಾಹಕ ಎಂಜಿ ನಿಯರ್‌ ಸಂಬಂಧಿಸಿದ ಇಲಾ ಖೆಯ ಅಧಿಕಾರಿಗಳನ್ನು ಕೋರಿದರು.

ಸುರಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಿದ್ದು ಇದನ್ನು ಆದ್ಯತೆ ಮೇರೆಗೆ ಪರಿಗಣಿಸಿ ಸರಿಪಡಿಸಲು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಕರಿಗೆ ಸೂಚಿಸಿದರು.  ಗುರುಮಠಕಲ್ ಪುರಸ ಭೆಯಲ್ಲಿ ಮಾತ್ರ ಒಂದು ಕುಡಿಯುವ ನೀರಿನ ಟ್ಯಾಂಕ್ ಇರುವದಾಗಿ ಅಧಿ ಕಾರಿಗಳು ಸಭೆಯ ಗಮನಕ್ಕೆ ತಂದರು.

ಜಿಲ್ಲೆಯಲ್ಲಿ ಮೇವಿನ ಬ್ಯಾಂಕ್, ಗೋ-ಶಾಲೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಪರಿಶೀಲನೆ ಮಾಡಿ ವರದಿ ಸಲ್ಲಿಸಲು ಸಹಾಯಕ ಆಯುಕ್ತರಿಗೆ ತಿಳಿಸಿದರು. ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಮೇವು ಬ್ಯಾಂಕ್ ತೆರೆಯಲು ಸೂಚನೆ:

ಯಾದಗಿರಿ: ಜಾನುವಾರುಗಳಿಗೆ ಮೇವು ಬ್ಯಾಂಕ್ ಪ್ರಾರಂಭಿಸಲು ಜಿಲ್ಲೆಯ ಮೂರು ತಾಲ್ಲೂಕಿನಲ್ಲಿ ಮೇವು ಬ್ಯಾಂಕ್ ತೆರೆಯಲು ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕರಿಗೆ ಇಲಾಖೆಯಿಂದ ನಿರ್ದೇಶನ ನೀಡಲಾಗಿದೆ.

ಒಂದು ತಾಲ್ಲೂಕಿಗೆ 100 ಟನ್ ಮೇವನ್ನು 15 ದಿನಗಳ ಮಟ್ಟಿಗೆ ಸಂಗ್ರಹಿಸಿಡಬೇಕಿದೆ. ಮೇವು ಬ್ಯಾಂಕ್‌ ಅನ್ನು ಎಪಿಎಂಸಿ ಯಾರ್ಡ್‌ನಲ್ಲಿ ಸ್ಥಾಪಿಸಲು ಸ್ಥಳ ಗುರುತಿಸಲಾಗಿರುವ ಕುರಿತು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಪ್ರತಿ ತಾಲ್ಲೂಕಿಗೆ ₹ 10 ಲಕ್ಷ ಅನುದಾನ ಬಿಡುಗಡೆ ಮಾಡಲು ಅಧಿಕಾರಿಗಳು ಸಭೆಯಲ್ಲಿ ಕೋರಿದರು. ಮೇವು ಟೆಂಡರ್ ಮುಖಾಂತರ ಸಂಗ್ರಹಿಸುವುದು, ₹ 6 ರೂಪಾಯಿಯಂತೆ ಮೇವು ಖರೀದಿ ಮತ್ತು ಸಾಗಾಣಿಕೆ ವೆಚ್ಚ, ಲೋಡಿಂಗ್-ಅನ್‌ಲೋಡಿಂಗ್ ವೆಚ್ಚ ಸೇರಿ ಖರೀದಿಸಲು ಟೆಂಡರ್ ಅಥವಾ ದರ ಪಟ್ಟಿ ಮುಖಾಂತರ ಖರೀದಿಸಲು ಸೂಚಿಸಿದ ಜಿಲ್ಲಾಧಿಕಾರಿ, ಇದಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.

2016-17ನೇ ಸಾಲಿನಲ್ಲಿ 1,500 ಮೇವು ಮಿನಿ ಕಿಟ್ ಸರಬರಾಜು ಆಗಿದ್ದು, ಅವುಗಳನ್ನು ನೀರಾವರಿ ಸೌಲಭ್ಯವಿರುವ ಹಾಗೂ ರಾಸು ಗಳನ್ನು ಹೊಂದಿರುವ ರೈತರನ್ನು ಗುರುತಿಸಿ ವಿತರಣೆ ಮಾಡುವುದಾಗಿ ಪಶುಪಾಲನಾ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

10 ದಿವಸದೊಳಗಾಗಿ ಮೇವು ಕಿಟ್‌ಗಳನ್ನು ಅರ್ಹ ರೈತರಿಗೆ ವಿತರಣೆ ಮಾಡಲು ಕ್ರಮ ವಹಿಸಲು ಅವರು ಹೇಳಿದರು. ಮೇವು ಮಿನಿ ಕಿಟ್‌ಗಳನ್ನು ಬೆಳೆಯುವ ವಿಧಿ-ವಿಧಾನಗಳನ್ನು ರೈತರಿಗೆ ಮನವರಿಕೆ ಮಾಡಿಕೊಡುವಂತೆ ಅವರು ತಿಳಿಸಿದರು.

2016-17ನೇ ಸಾಲಿನಲ್ಲಿ ಅಗತ್ಯವಿದ್ದಲ್ಲಿ ಮಾತ್ರ ಗೋ-ಶಾಲೆ ಯನ್ನು ತೆರೆಯಬಹುದಾಗಿದ್ದು , ಸದ್ಯ ಕ್ಕೆ ಗೋಶಾಲೆಯ ಅಗತ್ಯವಿಲ್ಲ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಸಭೆಯಲ್ಲಿ ತಿಳಿಸಿದರು.

ಅಂಕಿ–ಅಂಶ

1,151 – ಎನ್‌ಆರ್‌ಡಿಡಬ್ಲ್ಯೂಪಿ ಯೋಜನೆ ಅಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು

134   – ಎಲ್‌ಪಿಸಿಡಿ ಯೋಜನೆ ಅಡಿ ಒಟ್ಟು ಕಾಮಗಾರಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT