ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಂಗ್ರೆಸ್‌ ಮುಕ್ತ ಕಲಬುರ್ಗಿ ಗುರಿ’

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಿಣಿ
Last Updated 13 ಫೆಬ್ರುವರಿ 2017, 8:25 IST
ಅಕ್ಷರ ಗಾತ್ರ

ಕಲಬುರ್ಗಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 9 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಬೇಕು. ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿಸಲು ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಮುಖ ಪಾತ್ರವಹಿಸಬೇಕು ಎಂದು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಲಿಂಗರಾಜ ಬಿರಾದಾರ ತಿಳಿಸಿದರು.

ತಾಲ್ಲೂಕಿನ ಶಾಹಬಾದನಲ್ಲಿ ಶನಿವಾರ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಲಬುರ್ಗಿ ಜಿಲ್ಲೆಯನ್ನು ಕಾಂಗ್ರೆಸ್‌ ಮುಕ್ತಗೊಳಿಸುವುದು ಮುಖ್ಯ ಗುರಿಯಾಗಬೇಕು ಎಂದರು.

ಮುಖಂಡರಾದ ಶಾಮಪ್ರಸಾದ ಮುಖರ್ಜಿ, ಪಂಡಿತ್ ದೀನ್‌ದಯಾಳ್‌, ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ, ನಾನಾಜಿ ದೇಶಮುಖ, ಸುಂದರ ಸಿಂಗ್ ಭಂಡಾರಿಯವರು ಕಷ್ಟಪಟ್ಟು ಬಿಜೆಪಿ ಬೆಳೆಸಿದ್ದಾರೆ. ಅವರ ಆಶಯದಂತೆ ಪಕ್ಷ ಮುನ್ನಡೆಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.

ವಿದ್ಯಾಸಾಗರ ಕುಲಕರ್ಣಿ ಮತ್ತು ಶರಣಪ್ಪ ಹದನೂರ ಪಂಡಿತ್ ದೀನ್‌ದಯಾಳ್ ಕುರಿತು ವಿಶೇಷ ಉಪನ್ಯಾಸ ನೀಡಿದರು.  ಶಾಹಬಾದ ಮಂಡಲ ಅಧ್ಯಕ್ಷ ಸುಭಾಷ ಜಾಪುರ, ಸಂದೀಪ ಹದನೂರ, ಚಂದ್ರಕಾಂತ ಗೊಬ್ಬೂರು, ಈರಣ್ಣ ಹಡಪದ, ಭಾನುದಾಸ ತುರೆ, ಪ್ರಕಾಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT