ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ನ ಲಾಹೋರಿನಲ್ಲಿ ಆತ್ಮಾಹುತಿ ಬಾಂಬ್‌ ದಾಳಿ, 16 ಸಾವು

Last Updated 13 ಫೆಬ್ರುವರಿ 2017, 16:14 IST
ಅಕ್ಷರ ಗಾತ್ರ

ಲಾಹೋರ್‌: ಪಾಕಿಸ್ತಾನದ ಲಾಹೋರ್‌ನ ಹೃದಯಭಾಗದಲ್ಲಿ ಸೋಮವಾರ ಸಂಜೆ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 16 ಜನ ಮೃತಪಟ್ಟು 40ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.

ಮೃತಪಟ್ಟವರಲ್ಲಿ ಇಬ್ಬರು ಹಿರಿಯ ಪೊಲೀಸ್‌ ಅಧಿಕಾರಿಗಳು ಮತ್ತು ನಾಲ್ವರು ಪೇದೆಗಳು ಸೇರಿದ್ದಾರೆ. ಲಾಹೋರಿನ ಮಾಲ್‌ ರೋಡ್‌ನಲ್ಲಿ ಔಷಧ ಕಾಯ್ದೆಗೆ ತಿದ್ದುಪಡಿ ತರುವಂತೆ ಔಷಧ ಮಾರಾಟಗಾರರ ಮತ್ತು ಉತ್ಪಾದಕರ ಸಂಘ ಪ್ರತಿಭಟನೆ ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ಆಗಂತುಕನೊಬ್ಬ ಸ್ಫೋಟಿಸಿಕೊಂಡಿದ್ದಾನೆ.

ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಸರ್ಕಾರಿ ಕಚೇರಿ ಎದುರು ಪ್ರತಿಭಟನಾ ನಿರತರನ್ನು ಗುರಿಯಾಗಿಸಿಕೊಂಡು ನಡೆಸಿರುವ ದಾಳಿಯಾಗಿದೆ.



ಪಾಕ್‌ನಲ್ಲಿರುವ ತಾಲಿಬಾನಿ ಬಣ ಜಮಾತ್‌–ಉಲ್‌–ಅಹ್ರಾರ್‌ ಈ ಕೃತ್ಯದ ಹೊಣೆ ಹೊತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕೆಲ ದಿನಗಳ ಹಿಂದೆ ಗುಪ್ತಚರ ಇಲಾಖೆಯು ಬಾಂಬ್‌ ದಾಳಿ ನಡೆಯಬಹುದು ಎಂದು ಎಚ್ಚರಿಕೆ ಸಂದೇಶ ರವಾನಿಸಿತ್ತು. ಲಾಹೋರಿಗೆ ಇಬ್ಬರು ಆತ್ಮಾಹುತಿ ಬಾಂಬರ್‌ಗಳು ಪ್ರವೇಶಿಸಿದ್ದಾರೆ ಎಂದು ಮಾಹಿತಿ ನೀಡಿತ್ತು.

ಸ್ಥಳಕ್ಕೆ ಪಾಕಿಸ್ತಾನಿ ಸೇನೆ ತೆರಳಿದೆ. ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT