ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಜಾವಾಣಿ – ಡೆಕ್ಕನ್‌ ಹೆರಾಲ್ಡ್‌’ ಜನಸ್ಪಂದನ ಇದೇ 18ರಂದು

ವಿಜಯನಗರ ಕ್ಷೇತ್ರದ ಕುಂದುಕೊರತೆ ಆಲಿಸಲು ವೇದಿಕೆ
Last Updated 15 ಫೆಬ್ರುವರಿ 2017, 6:23 IST
ಅಕ್ಷರ ಗಾತ್ರ

ಬೆಂಗಳೂರು: ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಪ್ರಜಾವಾಣಿ ಮತ್ತು ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆಗಳ ಆಶ್ರಯದಲ್ಲಿ ಇದೇ 18ರಂದು ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಹಂಪಿನಗರ ಬಸ್‌ನಿಲ್ದಾಣದ ಬಳಿಯ  ಚಂದ್ರಶೇಖರ ಆಜಾದ್‌ ಆಟದ ಮೈದಾನದಲ್ಲಿ   ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೆ ಜನಸ್ಪಂದನ ನಡೆಯಲಿದೆ. ವಿಜಯನಗರ ಕ್ಷೇತ್ರದ ಶಾಸಕರಾಗಿರುವ ಸಚಿವ ಎಂ.ಕೃಷ್ಣಪ್ಪ, ಕ್ಷೇತ್ರದ ವಿವಿಧ  ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾರ್ವಜನಿಕರು ತಮ್ಮ ವಾರ್ಡ್‌ಗಳ  ಕುಡಿಯುವ ನೀರು ಪೂರೈಕೆ ವ್ಯತ್ಯಯ, ಕಸ ವಿಲೇವಾರಿ ಸಮಸ್ಯೆ, ರಸ್ತೆ ಸುರಕ್ಷತೆ,  ಉದ್ಯಾನಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ತನ್ಮೂಲಕ ವಾರ್ಡ್‌ನ ಅಭಿವೃದ್ಧಿಯಲ್ಲಿ ಕೈಜೋಡಿಸಬಹುದು.

ವಿಜಯನಗರ ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು 18ರಂದು ಬೆಳಿಗ್ಗೆ 8.30ರಿಂದ 9.30 ಗಂಟೆವರೆಗೆ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಬೆಳಿಗ್ಗೆ 10ರಿಂದ ಪ್ರಶ್ನೆಗಳನ್ನು ಕೇಳಲು ಅವಕಾಶ ಕಲ್ಪಿಸಲಾಗುತ್ತದೆ.

ಕುಂದುಕೊರತೆಗಳ ಬಗ್ಗೆ ಇ–ಮೇಲ್‌  (ವಿಳಾಸ:janaspandana@printersmysore.co.in) ಕೂಡಾ ಮಾಡಬಹುದು.  ಸಂಪರ್ಕ:  9449673067, 9964291108 ಅಥವಾ 080–25880199 (ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಕರೆ ಮಾಡಬಹುದು).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT